ADVERTISEMENT

ಮಕ್ಕಳಲ್ಲಿ ಹೆಚ್ಚುತ್ತಿರುವ ಮಾರಿ ಕೊರೊನಾ: ಮೈಸೂರಲ್ಲಿ ಶಾಲೆಗಳು ಬಂದ್

​ಪ್ರಜಾವಾಣಿ ವಾರ್ತೆ
Published 11 ಜನವರಿ 2022, 15:28 IST
Last Updated 11 ಜನವರಿ 2022, 15:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮೈಸೂರು: ಮೈಸೂರು ಜಿಲ್ಲೆಯಲ್ಲಿಹೆಚ್ಚಿನ ಮಕ್ಕಳು ಕೊರೊನಾ ಸೋಂಕಿಗೆ ಒಳಗಾಗುತ್ತಿರುವುದರಿಂದ ನಗರ ಮತ್ತು ತಾಲ್ಲೂಕಿನಲ್ಲಿ ಅಂಗನವಾಡಿಯಿಂದ 10ನೇ ತರಗತಿಯವರೆಗಿನ ಭೌತಿಕ ತರಗತಿಗಳನ್ನು ಜ.12ರಿಂದ ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ಆನ್‌ಲೈನ್ ತರಗತಿಗಳನ್ನು ನಡೆಸಲು ಸೂಚಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಒಟ್ಟು 138 ಮಕ್ಕಳು ಸೋಂಕಿತರಾಗಿದ್ದಾರೆ. ಮಂಗಳವಾರ 562 ಮಂದಿಗೆ ಸೋಂಕು ತಗುಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,868ಕ್ಕೆ ಹೆಚ್ಚಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.