ADVERTISEMENT

ಮೈಸೂರು: 979 ಮಂದಿಗೆ ಕೋವಿಡ್‌

ಜಿಲ್ಲೆಯಲ್ಲಿ 1,317 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2020, 2:09 IST
Last Updated 8 ಅಕ್ಟೋಬರ್ 2020, 2:09 IST

ಮೈಸೂರು: ಜಿಲ್ಲೆಯಲ್ಲಿ ಸತತ ಎರಡನೇ ದಿನವೂ ಸಾವಿರಕ್ಕೂ ಅಧಿಕ ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಆರೋಗ್ಯ ಇಲಾಖೆಯ ಅಂಕಿ–ಅಂಶದ ಪ್ರಕಾರ ಬುಧವಾರ 1,317 ಮಂದಿ ಗುಣಮುಖರಾಗಿದ್ದಾರೆ. ಮಂಗಳವಾರ 1,169 ಮಂದಿ ಸೋಂಕುಮುಕ್ತರಾಗಿದ್ದರು.

ಇದೇ ವೇಳೆ 979 ಹೊಸ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಒಟ್ಟು ಸಂಖ್ಯೆ 39,590ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7,056 ಸಕ್ರಿಯ ಪ್ರಕರಣಗಳು ಇವೆ.

ADVERTISEMENT

5,169 ಮಂದಿ ಮನೆಯಲ್ಲೇ ಐಸೊಲೇಷನ್‌ ಆಗಿದ್ದಾರೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 318, ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 102, ಕೋವಿಡ್‌ ಕೇರ್‌ ಕೇಂದ್ರದಲ್ಲಿ 657, ಖಾಸಗಿ ಕೋವಿಡ್‌ ಕೇರ್‌ ಕೇಂದ್ರದಲ್ಲಿ 209 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 601 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೋಗಿಗಳ ಸಂಪರ್ಕಕ್ಕೆ ಬಂದ 637 ಮಂದಿ, ಶೀತ ಜ್ವರ ಮಾದರಿಯ ಅನಾರೋಗ್ಯ ಲಕ್ಷಣದಿಂದ (ಐಎಲ್‌ಐ) ಬಳಲುತ್ತಿದ್ದ 208 ಮಂದಿ, ತೀವ್ರ ಉಸಿರಾಟ ಸಮಸ್ಯೆಯಿಂದ (ಎಸ್‌ಎಆರ್‌ಐ) ಬಳಲುತ್ತಿದ್ದ 32 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

9 ಸಾವು: ಜಿಲ್ಲೆಯಲ್ಲಿ ಕೋವಿಡ್‌ಗೆ ಮತ್ತೆ 9 ಮಂದಿ ಮೃತಪಟ್ಟಿದ್ದಾರೆ. 72, 87, 48, 42 ಮತ್ತು 72 ವರ್ಷದ ಪುರುಷರು ಹಾಗೂ 55, 76, 48 ಮತ್ತು 84 ವರ್ಷದ ಮಹಿಳೆಯರು ವಿವಿಧ ದಿನಗಳಲ್ಲಿ ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆಯ ವರದಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.