ADVERTISEMENT

ಮೈಸೂರು: 221 ಜನರಿಗೆ ಕೋವಿಡ್; 199 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2020, 2:15 IST
Last Updated 8 ಸೆಪ್ಟೆಂಬರ್ 2020, 2:15 IST
ಮೈಸೂರಿನ ಪುರಭವನದಲ್ಲಿ ಸೋಮವಾರ ನಡೆದ ಕೋವಿಡ್ ಪರೀಕ್ಷೆಯಲ್ಲಿ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು
ಮೈಸೂರಿನ ಪುರಭವನದಲ್ಲಿ ಸೋಮವಾರ ನಡೆದ ಕೋವಿಡ್ ಪರೀಕ್ಷೆಯಲ್ಲಿ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು   

ಮೈಸೂರು: ಜಿಲ್ಲೆಯಲ್ಲಿ ಸೋಮವಾರ 221 ಜನರಲ್ಲಿ ಕೋವಿಡ್–19 ದೃಢಪಟ್ಟಿದ್ದು, 199 ಮಂದಿ ಗುಣಮುಖರಾಗಿದ್ದಾರೆ. 9 ಜನರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 22,301ಕ್ಕೆ ತಲುಪಿದೆ. ಗುಣಮುಖರ ಸಂಖ್ಯೆ 14,695 ಆಗಿದೆ. ಸಾವಿನ ಸಂಖ್ಯೆಯೂ 512ಕ್ಕೆ ತಲುಪಿದೆ. ‌

ಪ್ರಸ್ತುತ 7,094 ಜನರು ಕೋವಿಡ್–19ಗೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ. 307 ಮಂದಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರೆ, 862 ಜನರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಆರೈಕೆಯಲ್ಲಿದ್ದಾರೆ. 103 ಮಂದಿ ಹೆಲ್ತ್‌ ಕೇರ್‌ ಸೆಂಟರ್‌ಗೆ ದಾಖಲಾಗಿದ್ದಾರೆ.

ADVERTISEMENT

ಮನೆಯಲ್ಲೇ 5,297 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮ ನಿವಾಸಗಳಲ್ಲೇ ಐಸೊಲೇಷನ್‌ ಆಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಿದೆ. 257 ಮಂದಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದು, 268 ಜನರು ಖಾಸಗಿ ಕೋವಿಡ್ ಕೇರ್ ಸೆಂಟರ್‌ಗೆ ಆರೈಕೆಗಾಗಿ ದಾಖಲಾಗಿದ್ದಾರೆ ಎಂಬುದು ಜಿಲ್ಲಾಡಳಿತದ ಅಂಕಿ–ಅಂಶಗಳಿಂದ ತಿಳಿದು ಬಂದಿದೆ.

ಕೋವಿಡ್‌ ಅಂಕಿ–ಅಂಶ

ಜಿಲ್ಲೆಯಲ್ಲಿ ಒಟ್ಟು–22,301,ಸಕ್ರಿಯ ಪ್ರಕರಣ–7,094, ಗುಣಮುಖ–14,695, ಸಾವು–512

ದಿನದ ಏರಿಕೆ–221, ಗುಣಮುಖ–199, ಸಾವು–9

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.