ADVERTISEMENT

ಕೋವಿಡ್-19 | ಐವರು ಗರ್ಭಿಣಿಯರಿಗೆ ಸೋಂಕು

130 ಮಂದಿಗೆ ಕೋವಿಡ್‌– ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 17 ಜುಲೈ 2020, 5:17 IST
Last Updated 17 ಜುಲೈ 2020, 5:17 IST
ಮೈಸೂರಿನ ಸರಸ್ವತಿಪುರಂನ ರಸ್ತೆಯೊಂದರ ಅಂಗಡಿಗಳನ್ನು ಗುರುವಾರ ಸೀಲ್‌ಡೌನ್‌ ಮಾಡಲಾಗಿದೆ
ಮೈಸೂರಿನ ಸರಸ್ವತಿಪುರಂನ ರಸ್ತೆಯೊಂದರ ಅಂಗಡಿಗಳನ್ನು ಗುರುವಾರ ಸೀಲ್‌ಡೌನ್‌ ಮಾಡಲಾಗಿದೆ   

ಮೈಸೂರು: ಐವರು ಗರ್ಭಿಣಿಯರು ಸೇರಿದಂತೆ ಜಿಲ್ಲೆಯಲ್ಲಿ ಮತ್ತೆ 130 ಮಂದಿಗೆ ಕೋವಿಡ್‌–19 ಇರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,320ಕ್ಕೇರಿದೆ.

ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ. 70 ವರ್ಷದ ವೃದ್ಧ, 60 ವರ್ಷದ ವೃದ್ಧೆ, 45 ವರ್ಷದ ಪುರುಷ ಮೃತಪಟ್ಟವರು. ಎಲ್ಲರೂ ತೀವ್ರ ಉಸಿರಾಟ ಸಮಸ್ಯೆಯಿಂದ (ಎಸ್‌ಎಆರ್‌ಐ) ಬಳಲುತ್ತಿದ್ದರು. ಇದುವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 50ಕ್ಕೇರಿದೆ.

ತೀವ್ರ ಉಸಿರಾಟ ಸಮಸ್ಯೆಯಿಂದ (ಎಸ್‌ಎಆರ್‌ಐ) ಬಳಲುತ್ತಿದ್ದ 19 ಮಂದಿಯಲ್ಲಿ, ಶೀತ ಜ್ವರ ಮಾದರಿಯ ಅನಾರೋಗ್ಯ ಲಕ್ಷಣದಿಂದ (ಐಎಲ್‌ಐ) ಬಳಲುತ್ತಿದ್ದ 42 ಮಂದಿ, ಇತರ ರಾಜ್ಯ ಹಾಗೂ ಜಿಲ್ಲೆಗಳಿಂದ ಬಂದ 8 ಮಂದಿಯಲ್ಲಿ ಹಾಗೂ ಪ್ರಾಥಮಿಕ ಸಂಪರ್ಕಿತ 57 ಮಂದಿಯಲ್ಲಿ ಸೋಂಕು ಇರುವುದು ಗೊತ್ತಾಗಿದೆ. ಗುರುವಾರ 28 ಮಂದಿ ಚೇತರಿಸಿಕೊಂಡಿದ್ದಾರೆ.

ADVERTISEMENT

ಕೋವಿಡ್‌ ಜಿಲ್ಲಾ ಆಸ್ಪತ್ರೆಯಲ್ಲಿ 230, ಕೋವಿಡ್‌ ಇತರ ಆಸ್ಪತ್ರೆಗಳಲ್ಲಿ 77, ಕೋವಿಡ್‌ ಕೇರ್‌ ಕೇಂದ್ರದಲ್ಲಿ 105 ಹಾಗೂ 246 ಮಂದಿಯನ್ನು ಮನೆಯಲ್ಲೇ ಐಸೊಲೇಷನ್‌ ಮಾಡಲಾಗಿದೆ. 81 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 12 ಮಂದಿ ಐಸಿಯುನಲ್ಲಿದ್ದಾರೆ.

2,100ಮಂದಿಯನ್ನು 14 ದಿನಗಳ ಹೋಂ ಕ್ವಾರಂಟೈನ್‌ ಮಾಡಲಾಗಿದೆ. ಒಟ್ಟು 29,713 ಮಂದಿಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ.

ಅಂಕಿ ಅಂಶ...

1,320; ಜಿಲ್ಲೆಯಲ್ಲಿ ಒಟ್ಟು ಕೋವಿಡ್‌ ಪ್ರಕರಣ

531; ಇದುವರೆಗೆ ಗುಣಮುಖರಾದವರು

739; ಸಕ್ರಿಯ ಪ್ರಕರಣಗಳು

50; ಇದುವರೆಗೆ ಮೃತಪಟ್ಟವರು‌‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.