ADVERTISEMENT

ಮೈಸೂರು ತಲುಪಿದ ಆಮ್ಲಜನಕ ಟ್ಯಾಂಕ್‌

​ಪ್ರಜಾವಾಣಿ ವಾರ್ತೆ
Published 12 ಮೇ 2021, 7:53 IST
Last Updated 12 ಮೇ 2021, 7:53 IST
 20 ಸಾವಿರ ಲೀಟರ್ ಆಮ್ಲಜನಕ ತುಂಬಿದ ಟ್ಯಾಂಕ್
20 ಸಾವಿರ ಲೀಟರ್ ಆಮ್ಲಜನಕ ತುಂಬಿದ ಟ್ಯಾಂಕ್   

ಮೈಸೂರು: ಕೇಂದ್ರ ಸರ್ಕಾರವು ಆಮ್ಲಜನಕ ಎಕ್ಸ್‌ಪ್ರೆಸ್‌ನಲ್ಲಿ ಮಂಗಳವಾರ ಬೆಂಗಳೂರಿಗೆ ಸಾಗಿಸಿದ್ದ ಆಮ್ಲಜನಕದ ಒಂದು ಕಂಟೈನರ್‌ ಅನ್ನು (ಟ್ಯಾಂಕ್‌) ಬುಧವಾರ ಬೆಳಿಗ್ಗೆ ಮೈಸೂರಿಗೆ ತರಲಾಯಿತು. ಈ ಕಂಟೈನರ್‌ನಲ್ಲಿ 20 ಸಾವಿರ ಲೀಟರ್ ಆಮ್ಲಜನಕ ತುಂಬಿದೆ.

ಈ ಆಮ್ಲಜನಕವನ್ನು ಸ್ಥಳೀಯವಾಗಿ ಶೇಖರಿಸಿ ಕೂಡಲೇ ಕಂಟೈನರ್‌ ಹಿಂದಿರುಗಿಸಬೇಕಿತ್ತು. ಆದರೆ, ಇಷ್ಟು ಆಮ್ಲಜನಕವನ್ನು ಸಂಗ್ರಹಿಸಲು ಬೇಕಾದ ಶೇಖರಣಾ ಘಟಕ ಮೈಸೂರು ಜಿಲ್ಲೆಯಲ್ಲಿ ಇರಲಿಲ್ಲ.

ಹೀಗಾಗಿ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ವಿಕೋಪ ನಿರ್ವಹಣೆ ಕಾಯ್ದೆ ಪ್ರಯೋಗಿಸಿ ಕಡಕೊಳ ಕೈಗಾರಿಕಾ ಪ್ರದೇಶದ ತ್ರಿನೇತ್ರ ಗ್ಯಾಸಸ್‌ನಲ್ಲಿದ್ದ ಸೌಲಭ್ಯವನ್ನು ಜಿಲ್ಲಾಡಳಿತದ ಸುಪರ್ದಿಗೆ ಪಡೆದಿದ್ದಾರೆ. ಅಲ್ಲದೇ, ಇಲ್ಲಿನ 20ಕೆಎಲ್‌ ಸಾಮರ್ಥ್ಯದ ಆಮ್ಲಜನಕ ಘಟಕದಲ್ಲಿ ಶೇಖರಿಸಲು ವ್ಯವಸ್ಥೆ ಕಲ್ಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.