ADVERTISEMENT

ಜಿಲ್ಲೆಯಲ್ಲಿ 465 ಮಂದಿಗೆ ಕೋವಿಡ್

ಜಿಲ್ಲೆಯಲ್ಲಿ ಮತ್ತೆ 13 ಸಾವು, 569 ಗುಣಮುಖ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2020, 6:30 IST
Last Updated 11 ಅಕ್ಟೋಬರ್ 2020, 6:30 IST

ಮೈಸೂರು: ಜಿಲ್ಲೆಯಲ್ಲಿ ಹೊಸದಾಗಿ 465 ಮಂದಿಯಲ್ಲಿ ಕೋವಿಡ್‌ ದೃಢಪಟ್ಟಿದೆ. ಇದರಿಂದ ಸೋಂಕಿತರ ಒಟ್ಟು ಸಂಖ್ಯೆ 41,523ಕ್ಕೆ ಏರಿಕೆಯಾಗಿದೆ.

ಇದೇ ವೇಳೆ 569 ಮಂದಿ ಗುಣಮುಖರಾಗಿದ್ದಾರೆ. ಇದೀಗ ಜಿಲ್ಲೆಯಲ್ಲಿ ಒಟ್ಟು 7,350 ಸಕ್ರಿಯ ಪ್ರಕರಣಗಳು ಇವೆ.

5,493 ಮಂದಿ ಮನೆಯಲ್ಲೇ ಐಸೊಲೇಷನ್‌ ಆಗಿದ್ದಾರೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 308 ಮಂದಿ, ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 96, ಕೋವಿಡ್‌ ಕೇರ್‌ ಕೇಂದ್ರದಲ್ಲಿ 602, ಖಾಸಗಿ ಕೋವಿಡ್‌ ಕೇರ್‌ ಕೇಂದ್ರದಲ್ಲಿ 171 ಹಾಗೂಖಾಸಗಿ ಆಸ್ಪತ್ರೆಯಲ್ಲಿ 680 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ರೋಗಿಗಳ ಸಂಪರ್ಕಕ್ಕೆ ಬಂದ 279 ಮಂದಿ, ಶೀತ ಜ್ವರಮಾದರಿಯ ಅನಾರೋಗ್ಯ ಲಕ್ಷಣದಿಂದ (ಐಎಲ್‌ಐ) ಬಳಲುತ್ತಿದ್ದ 112 ಮಂದಿ, ತೀವ್ರ ಉಸಿರಾಟ ಸಮಸ್ಯೆಯಿಂದ (ಎಸ್‌ಎಆರ್‌ಐ) ಬಳಲುತ್ತಿದ್ದ 17 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

13 ಸಾವು: ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಒಂದೇ ಸಮನೆ ಹೆಚ್ಚುತ್ತಿದೆ. ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯಲ್ಲಿದ್ದ 13 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಶನಿವಾರದ ವರದಿ ತಿಳಿಸಿದೆ. ಸತ್ತವರ ಒಟ್ಟು ಸಂಖ್ಯೆ 875ಕ್ಕೆ ಏರಿಕೆಯಾಗಿದೆ.

65, 82, 55, 40, 56, 93, 51, 66, 70, 51 ವರ್ಷ ಪುರುಷರು ಮತ್ತು 45, 48, 86 ವರ್ಷದ ಮಹಿಳೆಯರು ವಿವಿಧ ದಿನಗಳಲ್ಲಿ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 2,19,545 ಮಂದಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿದೆ. 48,969 ಮಂದಿ ಹೋಂಕ್ವಾರಂಟೈನ್‌ನಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.