ADVERTISEMENT

ಕೋವಿಡ್: 79 ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2020, 3:41 IST
Last Updated 8 ನವೆಂಬರ್ 2020, 3:41 IST

ಮೈಸೂರು: ಜಿಲ್ಲೆಯಲ್ಲಿ ಹೊಸದಾಗಿ 79 ಮಂದಿಗೆ ಕೋವಿಡ್‌ ದೃಢಪಟ್ಟಿದೆ. ಇತ್ತೀಚಿನ ದಿನಗಳಲ್ಲಿ ಮೈಸೂರಿನಲ್ಲಿ ಕಂಡುಬಂದ ಕನಿಷ್ಠ ಪ್ರಕರಣ ಇದಾಗಿದೆ.‌

‌ಇದೇ ವೇಳೆ 199 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳು 1005ಕ್ಕೆ ಇಳಿಕೆಯಾಗಿದೆ. ಇಬ್ಬರು ಮೃತಪಟ್ಟಿದ್ದು, ಸತ್ತವರ ಸಂಖ್ಯೆ 972ಕ್ಕೆ ತಲುಪಿದೆ.‌‌ 445 ಮಂದಿ ಮನೆಯಲ್ಲೇ ಐಸೊಲೇಷನ್‌ ಆಗಿದ್ದಾರೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 140 ಮಂದಿ, ಖಾಸಗಿ ಆಸ್ಪತ್ರೆಗಳಲ್ಲಿ 237 ಮಂದಿ, ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 62, ಖಾಸಗಿ ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 69, ಕೋವಿಡ್‌ ಕೇರ್‌ ಕೇಂದ್ರದಲ್ಲಿ 39, ಖಾಸಗಿ ಕೋವಿಡ್‌ ಕೇರ್‌ ಕೇಂದ್ರದಲ್ಲಿ 13 ಮಂದಿ ಆರೈಕೆ ಪಡೆಯುತ್ತಿದ್ದಾರೆ.

ರೋಗಿಗಳ ಸಂಪರ್ಕಕ್ಕೆ ಬಂದ 51 ಮಂದಿ, ಶೀತ ಜ್ವರ ಮಾದರಿಯ ಅನಾರೋಗ್ಯ ಲಕ್ಷಣದಿಂದ (ಐಎಲ್‌ಐ) ಬಳಲುತ್ತಿದ್ದ 19 ಮಂದಿ, ತೀವ್ರ ಉಸಿರಾಟ ಸಮಸ್ಯೆಯಿಂದ (ಎಸ್‌ಎಆರ್‌ಐ) ಬಳಲುತ್ತಿದ್ದ ಒಬ್ಬರು ಹಾಗೂ ಇತರ 8 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.