ADVERTISEMENT

ಕೋವಿಡ್: ಸಕ್ರಿಯ ಪ್ರಕರಣಗಳಲ್ಲಿ ಇಳಿಕೆ

ಹೊಸದಾಗಿ ಸೋಂಕಿತರಾದವರು 524, ಗುಣಮುಖರಾದವರು 633, 15 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 16:34 IST
Last Updated 21 ಸೆಪ್ಟೆಂಬರ್ 2020, 16:34 IST
ಕಾಂಗ್ರೆಸ್‌ ಹಮ್ಮಿಕೊಂಡಿರುವ ‘ಆರೋಗ್ಯ ಹಸ್ತ’ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ಸೋಮವಾರ ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಜನರನ್ನು ಕೋವಿಡ್‌ ತಪಾಸಣೆಗೆ ಒಳಪಡಿಸಿದರು. ಕಾಂಗ್ರೆಸ್‌ ಮುಖಂಡರಾದ ಆರ್‌.ಧ್ರುವನಾರಾಯಣ, ಎಂ.ಕೆ.ಸೋಮಶೇಖರ್‌, ಎಚ್‌.ಎ.ವೆಂಕಟೇಶ್‌ ಇದ್ದರು
ಕಾಂಗ್ರೆಸ್‌ ಹಮ್ಮಿಕೊಂಡಿರುವ ‘ಆರೋಗ್ಯ ಹಸ್ತ’ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ಸೋಮವಾರ ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಜನರನ್ನು ಕೋವಿಡ್‌ ತಪಾಸಣೆಗೆ ಒಳಪಡಿಸಿದರು. ಕಾಂಗ್ರೆಸ್‌ ಮುಖಂಡರಾದ ಆರ್‌.ಧ್ರುವನಾರಾಯಣ, ಎಂ.ಕೆ.ಸೋಮಶೇಖರ್‌, ಎಚ್‌.ಎ.ವೆಂಕಟೇಶ್‌ ಇದ್ದರು   

ಮೈಸೂರು: ಜಿಲ್ಲೆಯಲ್ಲಿ ಸೋಮವಾರ ಕೋವಿಡ್‌-19 ಸಕ್ರಿಯ ಪ್ರಕರಣಗಳಲ್ಲಿ ಇಳಿಕೆಯಾಗಿದೆ. ಭಾನುವಾರ 4,611 ಇದ್ದ ಸಕ್ರಿಯ ಪ್ರಕರಣಗಳ ಸಂಖ್ಯೆ ಸೋಮವಾರ 4,487ಕ್ಕೆ ಕಡಿಮೆಯಾಗಿದೆ.

ಕೊರೊನಾ ಸೋಂಕಿನಿಂದ 633 ಮಂದಿ ಗುಣಮುಖರಾಗುವ ಮೂಲಕ, ಕೋವಿಡ್‌ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 25,115ಕ್ಕೆ ತಲುಪಿದೆ. ಒಟ್ಟು 30,308 ಮಂದಿ ಸೋಂಕಿತರ ಪೈಕಿ 4,487 ಮಂದಿಯಷ್ಟೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ, 1,018 ಮತ್ತು ಭಾನುವಾರ 1,050 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದರು.

ಹೊಸದಾಗಿ 524 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇತರೆ ಕೋವಿಡ್ ರೋಗಿಗಳ ಸಂಪರ್ಕಕ್ಕೆ ಬಂದ 278 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಪ್ರಯಾಣ ಮಾಡಿ ಬಂದ 89 ಮಂದಿ ಸೋಂಕಿತರಾಗಿದ್ದಾರೆ. 134 ಮಂದಿ ಶೀತಜ್ವರದ ಮಾದರಿಯ ಲಕ್ಷಣಗಳಿಂದ ಬಳಲುತ್ತಿದ್ದಾರೆ. 23 ಮಂದಿಯಲ್ಲಿ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ADVERTISEMENT

4,487 ಸಕ್ರಿಯ ಪ್ರಕರಣಗಳ ಪೈಕಿ 2,903 ಮಂದಿ ಮನೆಯಲ್ಲೇ ಐಸೊಲೇಷನ್‌ ಆಗಿದ್ದಾರೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 314, ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 104, ಕೋವಿಡ್‌ ಕೇರ್‌ ಕೇಂದ್ರದಲ್ಲಿ 681, ಖಾಸಗಿ ಕೋವಿಡ್‌ ಕೇರ್‌ ಕೇಂದ್ರದಲ್ಲಿ 186 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 299 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ 15 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 706ಕ್ಕೆ ಏರಿಕೆಯಾಗಿದೆ. 73, 69, 65, 66, 85, 62, 68 ವರ್ಷದ ಪುರುಷರು ಹಾಗೂ 72, 65, 80, 58, 71, 50, 59, 45 ವರ್ಷದ ಮಹಿಳೆಯರು ಮೃತರಲ್ಲಿ ಸೇರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.