ADVERTISEMENT

ವೈದ್ಯರ ಮುಷ್ಕರದಿಂದ ಮೈಸೂರಿನಲ್ಲಿ ಕೋವಿಡ್‌ ವೈದ್ಯಕೀಯ ಸೇವೆ ಅಸ್ತವ್ಯಸ್ತ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2020, 6:17 IST
Last Updated 22 ಆಗಸ್ಟ್ 2020, 6:17 IST

ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರು ನಡೆಸುತ್ತಿರುವ ಮುಷ್ಕರದಿಂದಾಗಿ, ಜಿಲ್ಲೆಯಲ್ಲಿ ಕೋವಿಡ್ ವೈದ್ಯಕೀಯ ಸೇವೆಗಳು ಅಸ್ತವ್ಯಸ್ತಗೊಂಡಿವೆ.

ಹೊಸದಾಗಿ ಪತ್ತೆಯಾದ ಸೋಂಕಿತರನ್ನು ಆಸ್ಪತ್ರೆಗೆ ಕರೆತರುವ ಕಾರ್ಯ ನಿಂತಿದೆ. ತುರ್ತು ವೈದ್ಯಕೀಯ ಸೇವೆಯನ್ನಷ್ಟೇ ವೈದ್ಯರು ನೀಡುತ್ತಿದ್ದಾರೆ.

ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವ್ಯಾಪ್ತಿಗೆ ಒಳಪಟ್ಟ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಸೇವೆ ಎಂದಿನಂತಿದೆ. ಇಲ್ಲಿ ಸಂಸ್ಥೆಯ ವೈದ್ಯರೇ ಬಹುಪಾಲು ಕಾರ್ಯನಿರ್ವಹಿಸುತ್ತಿರುವುದರಿಂದ ಒಳರೋಗಿಗಳಿಗೆ ತೊಂದರೆಯಾಗಿಲ್ಲ. ಎಂದಿನಂತೆ ಕೆ.ಆರ್.ಆಸ್ಪತ್ರೆಯಲ್ಲಿ ಪರೀಕ್ಷೆಗಳು ನಡೆಯುತ್ತಿವೆ. ಆದರೆ, ವಿವಿಧೆಡೆ ಇಲಾಖೆ ವತಿಯಿಂದ ನಡೆಯುತ್ತಿದ್ದ ಪರೀಕ್ಷೆಗಳು ನಿಂತಿವೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ವೈದ್ಯರು, ಕೋವಿಡ್‌ ಪ್ರಕರಣಗಳಿಗೆ ಸಂಬಂಧಿಸಿದ ಮಾಹಿತಿಯನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಕಳುಹಿಸದ ಕಾರಣ ಹೆಲ್ತ್ ಬುಲೆಟಿನ್‌ನಲ್ಲಿ ಮೈಸೂರಿನ ವಿವರಗಳು ಪ್ರಕಟಗೊಂಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.