ADVERTISEMENT

ಮೈಸೂರು ಜಿಲ್ಲೆಯಲ್ಲಿ 910 ಮಂದಿಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2020, 1:49 IST
Last Updated 6 ಅಕ್ಟೋಬರ್ 2020, 1:49 IST

ಮೈಸೂರು: ಜಿಲ್ಲೆಯಲ್ಲಿ ಹೊಸದಾಗಿ 910 ಮಂದಿಯಲ್ಲಿ ಕೋವಿಡ್‌ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 38,238ಕ್ಕೆ ಏರಿಕೆಯಾಗಿದೆ.

ಇದೇ ವೇಳೆ 427 ಮಂದಿ ಗುಣಮುಖರಾಗಿದ್ದು, ಇದುವರೆಗೆ ಒಟ್ಟು 29,208 ಮಂದಿ ಕೊರೊನಾ ಸೋಂಕಿನಿಂದ ಮುಕ್ತರಾದಂತಾಗಿದೆ.

ರೋಗಿಗಳಸಂಪರ್ಕಕ್ಕೆ ಬಂದ 500 ಮಂದಿ, ಶೀತ ಜ್ವರ ಮಾದರಿಯ ಅನಾರೋಗ್ಯ ಲಕ್ಷಣದಿಂದ (ಐಎಲ್‌ಐ) ಬಳಲುತ್ತಿದ್ದ 205 ಮಂದಿ, ತೀವ್ರ ಉಸಿರಾಟ ಸಮಸ್ಯೆಯಿಂದ (ಎಸ್‌ ಎ ಆರ್‌ಐ) ಬಳಲುತ್ತಿದ್ದ 40 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತದ ಮಾಹಿತಿ ತಿಳಿಸಿದೆ.

ADVERTISEMENT

ಜಿಲ್ಲೆಯಲ್ಲಿಇದೀಗ ಒಟ್ಟು 8,212 ಸಕ್ರಿಯ ಪ್ರಕರಣಗಳು ಇವೆ. 6,348 ಮಂದಿ ಮನೆಯಲ್ಲೇ ಐಸೊಲೇಷನ್‌ ಆಗಿದ್ದಾರೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 317, ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 82, ಕೋವಿಡ್‌ ಕೇರ್‌ ಕೇಂದ್ರದಲ್ಲಿ 616, ಖಾಸಗಿ ಕೋವಿಡ್‌ ಕೇರ್‌ ಕೇಂದ್ರದಲ್ಲಿ 229 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 620 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಂಟು ಸಾವು: ಆರೋಗ್ಯ ಇಲಾಖೆಯ ಸೋಮವಾರದ ವರದಿ ಪ್ರಕಾರ ಜಿಲ್ಲೆಯಲ್ಲಿ ಕೋವಿಡ್‌ಗೆ ಮತ್ತೆ 8 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ 818ಕ್ಕೆ ಏರಿಕೆಯಾಗಿದೆ.

43, 53, 63, 85 ವರ್ಷದ ಪುರುಷರು ಮತ್ತು 84, 70, 62 ಹಾಗೂ 51 ವರ್ಷದ ಮಹಿಳೆಯರು ವಿವಿಧ ದಿನಗಳಲ್ಲಿ ಸಾವನ್ನಪ್ಪಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.