
ಮೈಸೂರು: ‘ಭಾರತ ಕಮ್ಯುನಿಸ್ಟ್ ಪಕ್ಷಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಹಾಗೂ ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆ ಖಂಡಿಸಿ ಹಮ್ಮಿಕೊಂಡಿರುವ ‘ಸಮತಾ ರಾಜ್ಯದ ಕನಸುಗಳೊಂದಿಗೆ ಶ್ರಮ ಶಕ್ತಿಯ ಸಂಘರ್ಷದ ಶತಮಾನದ ಪಯಣ’ ಜಾಥಾ ಡಿ.22ರಂದು ನಗರಕ್ಕೆ ಬರಲಿದೆ’ ಎಂದು ಕಾರ್ಯದರ್ಶಿ ಎಚ್.ಬಿ.ರಾಮಕೃಷ್ಣ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಅಂದು ಮಧ್ಯಾಹ್ನ 3ಕ್ಕೆ ನಗರದ ಹಿನಕಲ್ ಫ್ಲೈ ಓವರ್ ಬಳಿ ಜಾಥಾವನ್ನು ಬರಮಾಡಿಕೊಳ್ಳಲಾಗುವುದು. ನಂತರ ಜೆ.ಕೆ ಮೈದಾನದಿಂದ ಬೈಕ್ ರ‍್ಯಾಲಿ ನಡೆಸಿ, ಗಾಂಧಿ ವೃತ್ತದ ಬಳಿ ಸಂಜೆ 4ರಿಂದ 6ರವರೆಗೆ ಬಹಿರಂಗ ಸಭೆ ನಡೆಸಲಾಗುವುದು’ ಎಂದರು.
ಬಂಡವಾಳ ಶಾಹಿ, ಕಾರ್ಪೊರೇಟ್ ಕೋಮುವಾದಿ ಶಕ್ತಿಗಳ ವಿರುದ್ಧ ಜನಸಾಮಾನ್ಯರ ಧ್ವನಿಯಾಗಿ ಸಿಪಿಐ ಹೋರಾಟ ನಡೆಸುತ್ತಿದೆ. ಶತಮಾನೋತ್ಸವ ಕಾರ್ಯಕ್ರಮ ಅಂಗವಾಗಿ ಈಗಾಗಲೇ 26ರಂದು ಕೋಲಾರದ ಕೆಜಿಎಫ್ ನಗರದಲ್ಲಿ ಜಾಥಾಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಸಹ ಕಾರ್ಯದರ್ಶಿ ಕೆ.ಜಿ.ಸೋಮರಾಜೇ ಅರಸ್, ಜೆ.ಶಿವಣ್ಣ, ಬಸವರಾಜು, ಶಿವಮಾದು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.