ಮೈಸೂರು: ಬೈಕ್ ಒಂದಕ್ಕೆ ಹಿಂದಿನಿಂದ ಬಂದ ಕ್ರೇನ್ ಡಿಕ್ಕಿಯಾಗಿ ಬೈಕ್ ಸವಾರ ತಗಡೂರಿನ ನಿವಾಸಿ ರಂಗಸ್ವಾಮಿ (21) ಮೃತಪಟ್ಟಿದ್ದಾರೆ.
ಇವರು ಇಲ್ಲಿನ ರಿಂಗ್‌ರಸ್ತೆಯ ಪೊಲೀಸ್ ಬಡಾವಣೆ ಬಳಿ ಉತ್ತನಹಳ್ಳಿ ಕಡೆಗೆ ಹೋಗುತ್ತಿದ್ದಾಗ ಪೊಲೀಸ್ ಬಡಾವಣೆಯ ಸುಣ್ಣದಗೂಡು ಹತ್ತಿರ ಹಿಂದಿನಿಂದ ಬಂದ ಕ್ರೇನ್ ಡಿಕ್ಕಿ ಹೊಡೆದಿದೆ. ಆದರೆ, ಕ್ರೇನ್ ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡ ರಂಗಸ್ವಾಮಿ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸಿದ್ದಾರ್ಥನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.