ಮೈಸೂರು: ‘ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಡಿ.21ರಿಂದ 7 ದಿನಗಳವರೆಗೆ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೋರಿ ಹಮ್ಮಿಕೊಳ್ಳಲಾಗಿದೆ’ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ತಿಳಿಸಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನಗರದ ಬೇಡನ್ ಪೊವೆಲ್ ಪಬ್ಲಿಕ್ ಶಾಲೆಯ ಮೈದಾನದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಶನಿವಾರ ಆಯೋಜಿಸಿದ್ದ ‘ರಾಷ್ಟ್ರಧ್ವಜದೊಂದಿಗೆ ಜಾಥಾ’ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ ಸಂಸ್ಕೃತಿಯನ್ನು ಬಿಂಬಿಸುವಂತಹ ಜಾಂಬೋರಿ ಇದಾಗಲಿದೆ. 16 ರಾಷ್ಟ್ರಗಳು, ದೇಶದ ವಿವಿಧ ರಾಜ್ಯಗಳ 50ಸಾವಿರಕ್ಕೂ ಹೆಚ್ಚು ಮಕ್ಕಳು ತಮ್ಮ ಸಂಸ್ಕೃತಿಯನ್ನು ಮತ್ತು ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.