ADVERTISEMENT

ಅಭಿವೃದ್ಧಿ ನೆಪದಲ್ಲಿ ಮರ ಹನನ ಬೇಡ: ಕರ್ನಾಟಕ ಹಿತರಕ್ಷಣಾ ವೇದಿಕೆ

ಕರ್ನಾಟಕ ಹಿತರಕ್ಷಣಾ ವೇದಿಕೆ ಸದಸ್ಯರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2025, 3:18 IST
Last Updated 8 ಜುಲೈ 2025, 3:18 IST
ಮೈಸೂರಿನ ನಂಜರಾಜ ಬಹದ್ದೂರ್ ಛತ್ರದ ಆವರಣದಲ್ಲಿ ಕರ್ನಾಟಕ ಹಿತರಕ್ಷಣಾ ವೇದಿಕೆ ಸದಸ್ಯರು ಸೋಮವಾರ ಪ್ರತಿಭಟಿಸಿದರು
ಮೈಸೂರಿನ ನಂಜರಾಜ ಬಹದ್ದೂರ್ ಛತ್ರದ ಆವರಣದಲ್ಲಿ ಕರ್ನಾಟಕ ಹಿತರಕ್ಷಣಾ ವೇದಿಕೆ ಸದಸ್ಯರು ಸೋಮವಾರ ಪ್ರತಿಭಟಿಸಿದರು   

ಮೈಸೂರು: ನಂಜರಾಜ ಬಹದ್ದೂರ್ ಛತ್ರದ ಆವರಣದಲ್ಲಿರುವ ನೂರಕ್ಕೂ ಹೆಚ್ಚು ವರ್ಷದ ಹಳೆಯ ಮರದ ಸುತ್ತ ಇದ್ದ ಕಟ್ಟೆಯನ್ನು ದುರಸ್ತಿ ಮಾಡುವ ನೆಪದಲ್ಲಿ ಪಾಲಿಕೆ ಅಧಿಕಾರಿಗಳು ಅಲ್ಲಿದ್ದ ಮರ ಕಡಿಯಲು ಮುಂದಾಗಿರುವುದನ್ನು ಖಂಡಿಸಿ ಕರ್ನಾಟಕ ಹಿತರಕ್ಷಣಾ ವೇದಿಕೆ ಸದಸ್ಯರು ಸೋಮವಾರ ಪ್ರತಿಭಟಿಸಿದರು.

ವೇದಿಕೆ ಅಧ್ಯಕ್ಷ ವಿನಯ್‌ಕುಮಾರ್ ಮಾತನಾಡಿ, ‘ಅಭಿವೃದ್ಧಿ ನೆಪದಲ್ಲಿ ನೂರಾರು ವರ್ಷಗಳ ಇತಿಹಾಸ ಇರುವ ಬೃಹದಾಕಾರ ಮರದ ಬುಡಕ್ಕೆ ಕೊಡಲಿ ಪೆಟ್ಟು ನೀಡಿರುವುದು ಬೇಸರದ ವಿಚಾರ. ಅಭಿವೃದ್ಧಿಯ ನೆಪದಲ್ಲಿ ಮರಗಳ ಮಾರಣಹೋಮ ಮಾಡುತ್ತಾ ಬಂದಿದ್ದಾರೆ. ಕೇಳಲು ಹೋದರೆ ಬೇಜವಾಬ್ದಾರಿ ಉತ್ತರ ನೀಡಿದ್ದಾರೆ. ನಂಜರಾಜ ಬಹುದ್ದೂರ್ ಛತ್ರ ಪಾರಂಪರಿಕ ಕಟ್ಟಡವಾಗಿದ್ದು ಇದನ್ನು ಪಾರಂಪರಿಕ ವೃಕ್ಷ ಎಂದು ಘೋಷಿಸಬೇಕಿದೆ’ ಎಂದು ಆಗ್ರಹಿಸಿದರು.

‘ಮೊದಲು ಛತ್ರದ ಅಭಿವೃದ್ಧಿ ಕಾಮಗಾರಿ ಮಾಡಬೇಕು. ಅನಾವಶ್ಯಕ ಕಾಮಗಾರಿಗಳನ್ನು ಕೈಬಿಟ್ಟು ಮರಗಳ ರಕ್ಷಣೆಗೆ ಅಧಿಕಾರಿಗಳು ಮುಂದಾಗಬೇಕು. ಈ ಕೂಡಲೇ ಮರ ಕಡಿಯುವುದನ್ನು ನಿಲ್ಲಿಸಿ ಎಂದಿನಂತೆ ಸರಿಪಡಿಸಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಒತ್ತಾಯಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ADVERTISEMENT

ಮುಖಂಡರಾದ ವಿಕ್ರಮ ಅಯ್ಯಂಗಾರ್, ಜೀವದಾರ ರಕ್ತನಿಧಿ ಕೇಂದ್ರದ ಗಿರೀಶ್, ಹರೀಶ್ ಗೌಡ, ಮಂಜುನಾಥ್ ಗೌಡ, ಸಂದೇಶ್, ರವಿಚಂದ್ರ, ಎಸ್.ಎನ್.ರಾಜೇಶ್, ನೀತು, ಸಂತೋಷ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.