ADVERTISEMENT

ಬಲೂನ್‌ಗೆ ಹೀಲಿಯಂ ಗ್ಯಾಸ್ ತುಂಬುವ ಸಿಲಿಂಡರ್ ಸ್ಪೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2025, 16:07 IST
Last Updated 26 ಡಿಸೆಂಬರ್ 2025, 16:07 IST
<div class="paragraphs"><p>ಲಕ್ಷ್ಮಿ</p></div>

ಲಕ್ಷ್ಮಿ

   

ಮೈಸೂರು: ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ, ಬಲೂನ್‌ಗೆ ಹೀಲಿಯಂ ಗ್ಯಾಸ್ ತುಂಬುವ ಸಿಲಿಂಡರ್ ಸ್ಫೋಟಗೊಂಡ ಘಟನೆಯಲ್ಲಿ ಗಾಯಾಳುವಾಗಿದ್ದ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಲಕ್ಷ್ಮಿ (45) ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

ಫಟನೆಯಲ್ಲಿ ಬಲೂನು ಮಾರುತ್ತಿದ್ದ ಉತ್ತರ ಪ್ರದೇಶದ ಕನೋಜ್ ಜಿಲ್ಲೆ ತೊಫಿಯ ಗ್ರಾಮದ ಸಲೀಂ (40) ಹಾಗೂ ನಂಜನಗೂಡಿನ ಮಂಜುಳಾ (28) ಮೃತಪಟ್ಟಿದ್ದರು.

ADVERTISEMENT

ಲಕ್ಷ್ಮಿ ಅವರು ಮಗಳು ಹಾಗೂ ನಾದಿನಿಯೊಂದಿಗೆ ಬೆಳವಾಡಿಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ವಾಪಸ್‌ ತೆರಳುವಾಗ ಸಿಲಿಂಡರ್ ಸ್ಪೋಟ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರಿಗೆ ಕೆ.ಆರ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ನಾದಿನಿ ರಂಜಿತಾಗೂ ಗಾಯಗಳಾಗಿದ್ದು, ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.