ADVERTISEMENT

ಮೈಸೂರು: ಸಂಸದ ಪ್ರತಾಪಸಿಂಹ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2021, 7:44 IST
Last Updated 17 ನವೆಂಬರ್ 2021, 7:44 IST
   

ಮೈಸೂರು: ಶಾಸಕ ಪ್ರಿಯಾಂಕ್ ಖರ್ಗೆ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುರಿತು ಸಂಸದ ಪ್ರತಾಪ್ ಸಿಂಹ ಅವರು ಅವಹೇಳನಕಾರಿ ಶಬ್ದಗಳಿಂದ ನಿಂದಿಸಿದ್ದು, ಕೂಡಲೆ, ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟ ಸಮಿತಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಜಲದರ್ಶಿನಿಯ ಪ್ರತಾಪಸಿಂಹ ಅವರ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.

ಪ್ರಿಯಾಂಕ್ ಎಂಬ ಪದಕ್ಕೆ ಅರ್ಥ ತಿಳಿಯದ ಪ್ರತಾಪಸಿಂಹ ಅವರಿಗೆ ಸಾಮಾನ್ಯ ಜ್ಞಾನವೇ ಇಲ್ಲ.ಅರೆಹುಚ್ಚರಂತೆ, ಅಜ್ಞಾನಿಯಾಗಿ ಮಾತನಾಡಿದ್ದಾರೆ ಎಂದು ಖಂಡಿಸಿದರು.

ಒಂದು ವೇಳೆ ಕ್ಷಮೆ ಯಾಚಿಸದಿದ್ದರೆ ಮುಂದೆ ಪ್ರತಾಪಸಿಂಹ ಪಾಲ್ಗೊಳ್ಳುವ ಎಲ್ಲ ಕಾರ್ಯಕ್ರಮದಲ್ಲೂ ಘೇರಾವ್ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.