ADVERTISEMENT

ವಕೀಲ ಕಿಶೋರ್‌ ವಿರುದ್ಧ ಕಾನೂನು ಕ್ರಮವಹಿಸಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2025, 2:55 IST
Last Updated 8 ಅಕ್ಟೋಬರ್ 2025, 2:55 IST
ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ನಂಜನಗೂಡು ತಾಲ್ಲೂಕು ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು
ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ನಂಜನಗೂಡು ತಾಲ್ಲೂಕು ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು   

ಮೈಸೂರು: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರಿಗೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್‌ ಕಿಶೋರ್‌ ನಡೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ನಂಜನಗೂಡು ತಾಲ್ಲೂಕು ಕಚೇರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

‘ಈ ದುರ್ಘಟನೆಯು ನ್ಯಾಯಮೂರ್ತಿ ಮೇಲಿನ ದಾಳಿಯಲ್ಲ, ಬದಲಾಗಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉನ್ನತ ಹುದ್ದೆಯ ಮೇಲೆ ನಡೆದಿರುವ ದಾಳಿ. ಭಾರತದಲ್ಲಿ ಜಾತಿ ವ್ಯವಸ್ಥೆ ಎಷ್ಟು ಕ್ರೂರವಾಗಿದೆ ಎಂಬುದಕ್ಕೆ ಇದು ನಿದರ್ಶನ. ವಕೀಲ ರಾಕೇಶ್‌ ಕಿಶೋರ್‌ ವಿರುದ್ಧ ಕಠಿಣ ಕ್ರಮವಹಿಸಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT