ADVERTISEMENT

ಆಹಾರ ಮೇಳದಲ್ಲಿ ಮಹದೇವಪ್ಪ ಉಪಾಹಾರ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2025, 5:23 IST
Last Updated 5 ಅಕ್ಟೋಬರ್ 2025, 5:23 IST
ಮೈಸೂರು ದಸರಾ ಅಂಗವಾಗಿ ನಡೆಯುತ್ತಿರುವ ಆಹಾರ ಮೇಳಕ್ಕೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಭೇಟಿ ನೀಡಿದರು
ಮೈಸೂರು ದಸರಾ ಅಂಗವಾಗಿ ನಡೆಯುತ್ತಿರುವ ಆಹಾರ ಮೇಳಕ್ಕೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಭೇಟಿ ನೀಡಿದರು    

ಮೈಸೂರು: ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.
ಮಹದೇವಪ್ಪ ಅವರು ದಸರಾ ಅಂಗವಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದಿರುವ ಆಹಾರ ಮೇಳಕ್ಕೆ ಶನಿವಾರ ಭೇಟಿ ನೀಡಿ, ಉಪಾಹಾರ ಸೇವಿಸಿದರು. ಅಲ್ಲಿನ
ವ್ಯವಸ್ಥೆಯನ್ನು ಪರಿಶೀಲಿಸಿದರು.

ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ವಿಧಾನಪರಿಷತ್ ಸದಸ್ಯ
ರಾದ ಕೆ.ಶಿವಕುಮಾರ್, ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ
ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಎಸ್. ಯುಕೇಶ್ ಕುಮಾರ್, ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಡಿಸಿಪಿಗಳಾದ ಸುಂದರ್ ರಾಜು, ಬಿಂದುಮಣಿ, ಆಹಾರ ಮೇಳ ಉಪ ಸಮಿತಿ ಅಧ್ಯಕ್ಷ ಕೆ.ಎಂ. ಮಧುಕುಮಾರ್ ಮತ್ತು ಸದಸ್ಯರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT