ಮೈಸೂರು: ದಸರಾ ಮಹೋತ್ಸವದ ಜಂಬೂಸವಾರಿ ದಿನ ಅರಮನೆಯಿಂದ ಬನ್ನಿಮಂಟಪದ ಮೈದಾನದವರೆಗೆ ಜಂಬೂ ಸವಾರಿ ಸಾಗುವ ಮಾರ್ಗದ ರಸ್ತೆಯ ಎರಡೂ ಕಡೆಗಳಲ್ಲಿ ಹಳೆ, ಶಿಥಿಲ ಕಟ್ಟಡಗಳು, ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಮೇಲೆ ನಿಂತು ವೀಕ್ಷಣೆ ಮಾಡುವುದನ್ನು ತಪ್ಪಿಸಲು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನೇತೃತ್ವದ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿ, ಕಟ್ಟಡ ಮಾಲೀಕರಿಗೆ ಎಚ್ಚರಿಕೆ ನೀಡಿದರು.
‘ಜನ ಸಂದಣಿ ನಿರ್ವಹಣಾ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ಅನುಸಾರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಜೊತೆ ತೆರಳಿ ಪರಿಶೀಲನೆ ಮಾಡಲಾಯಿತು. ಲ್ಯಾನ್ಸ್ಡೌನ್ ಬಿಲ್ಡಿಂಗ್, ಕೆ.ಆರ್. ವೃತ್ತದ ಕಟ್ಟಡಗಳು, ದೇವರಾಜ ಮಾರುಕಟ್ಟೆ, ಪಂಚಮುಖಿ ವೃತ್ತದ ಕಟ್ಟಡಗಳು, ಹಾರ್ಸ್ ಸ್ಟ್ಯಾಂಡ್‌ಗಳನ್ನು ಹಳೆಯ ಕಟ್ಟಡಗಳೆಂದು ಗುರುತಿಸಲಾಗಿದೆ. ಜಂಬೂ ಸವಾರಿ ಸಮಯದಲ್ಲಿ ಕಟ್ಟಡಗಳ ಮೇಲೆ ತೆರಳಲು ಸಾರ್ವಜನಿಕರಿಗೆ ಅವಕಾಶ ನೀಡಬಾರದು ಎಂದು ಕಟ್ಟಡದ ಮಾಲೀಕರಿಗೆ ತಿಳಿಸಲಾಗಿದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.