ADVERTISEMENT

ಮೈಸೂರು| ದಶಪಥ ಹೆದ್ದಾರಿ ಪರಿಶೀಲಿಸುವೆ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2023, 6:53 IST
Last Updated 6 ಮಾರ್ಚ್ 2023, 6:53 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಮೈಸೂರು: ‘ಮೈಸೂರು–ಬೆಂಗಳೂರು ದಶಪಥ ಹೆದ್ದಾರಿಯನ್ನು ಮಾರ್ಚ್‌ 9ರಂದು ‍ಪರಿಶೀಲಿಸುತ್ತೇನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಈ ಹೆದ್ದಾರಿ ಯೋಜನೆ ಮಾಡಿದವರು ನಾವು. ಹೀಗಾಗಿ, ಅದರ ಕ್ರೆಡಿಟ್‌ ನಮ್ಮ ಸರ್ಕಾರಕ್ಕೆ ಸಲ್ಲಬೇಕು’ ಎಂದು ‍ಪ್ರತಿಪಾದಿಸಿದರು.

‘ಯೋಜನೆಯಲ್ಲಿ ಸಂಸದ ಪ್ರತಾಪ ಸಿಂಹನದ್ದಾಗಲಿ ಅಥವಾ ಬಿಜೆಪಿ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಪ್ರತಾಪ ಪ್ರತಿನಿಧಿಸುವ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಈ ಹೆದ್ದಾರಿಯ ಕೆಲವೇ ಕಿ.ಮೀ. ಮಾತ್ರವೇ ಸೇರುತ್ತದೆ. ಆದರೂ ನಮ್ಮದು, ನಾವೇ ಮಾಡಿಸಿದ್ದು ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪಗೆ ಈ ರಸ್ತೆಯ ಎಲ್ಲಾ ಮಾಹಿತಿಯೂ ಗೊತ್ತಿದೆ. ನಮ್ಮ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಅವರೇ ಮುಂದೆ ನಿಂತು ಈ ಯೋಜನೆಯನ್ನು ಮಾಡಿಸಿದ್ದರು’ ಎಂದು ಸಮರ್ಥಿಸಿಕೊಂಡರು.

ADVERTISEMENT

ಈ ಹೆದ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಮಾರ್ಚ್‌ 12ರಂದು ಉದ್ಘಾಟಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.