ADVERTISEMENT

ಪುನರ್‌ ಪರಿಶೀಲನೆಗೆ ಸೂಚಿಸಿದ ಜಿಲ್ಲಾಧಿಕಾರಿ

ಗ್ರಾಮ ಅರಣ್ಯಹಕ್ಕು ಸಮಿತಿಯಿಂದ ತಿರಸ್ಕೃತಗೊಂಡ ಅರ್ಜಿಗಳು

​ಪ್ರಜಾವಾಣಿ ವಾರ್ತೆ
Published 9 ಮೇ 2019, 20:08 IST
Last Updated 9 ಮೇ 2019, 20:08 IST

ಮೈಸೂರು: ಅರಣ್ಯ ಹಕ್ಕು ಕಾಯ್ದೆಯಡಿ ಗ್ರಾಮ ಅರಣ್ಯ ಹಕ್ಕು ಸಮಿತಿಯಿಂದ ತಿರಸ್ಕೃತಗೊಂಡ ಅರ್ಜಿಗಳನ್ನು ತಾಲ್ಲೂಕುವಾರು ಸಂಗ್ರಹಿಸಿ ಪುನರ್ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಸೂಚಿಸಿದ್ದಾರೆ.

ಇಲ್ಲಿ ಗುರುವಾರ ನಡೆದ ಸಭೆಯಲ್ಲಿ ಅವರು ಎಚ್.ಡಿ.ಕೋಟೆ, ಹುಣಸೂರು, ನಂಜನಗೂಡು ಹಾಗೂ ಪಿರಿಯಾಪಟ್ಟಣ ತಾಲ್ಲೂಕಿನ ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಈ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಜ್ಯೋತಿ, ನಾಗರಹೊಳೆ ವೃತ್ತದ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನದ ನಿರ್ದೇಶಕರು ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಬಂಡೀಪುರ ಹುಲಿ ಅರಣ್ಯ ಸಂರಕ್ಷಣಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳು ಹಾಗೂ ಇತರೆ ವಲಯ ಅರಣ್ಯಾಧಿಕಾರಿಗಳು, ತಹಶೀಲ್ದಾರ್, ತಾಲ್ಲೂಕು ಪಂಚಾಯತ್ ಮತ್ತು ತಾಲ್ಲೂಕು ಪರಿಶಿಷ್ಠ ವರ್ಗಗಳ ಅಧಿಕಾರಿಗಳು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.