ADVERTISEMENT

ಅಂಬೇಡ್ಕರ್‌ ಜಯಂತಿ: ಅರ್ಥಪೂರ್ಣ ಆಚರಣೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2023, 10:52 IST
Last Updated 1 ಏಪ್ರಿಲ್ 2023, 10:52 IST

ಮೈಸೂರು: ‘ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಅದಕ್ಕೆ ಅಡ್ಡಿಯಾಗದಂತೆ ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚಿಸಿದರು.

ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಏ.5ರಂದು ಡಾ.ಬಾಬು ಜಗಜೀವನರಾಂ ಹಾಗೂ ಏ.14ರಂದು ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಆಚರಿಸುವ ಸಂಬಂಧ ಶನಿವಾರ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಯಂತಿಗಳಂದು ಯಾವುದೇ ರಾಜಕೀಯ ಪಕ್ಷಗಳ ಅಭ್ಯರ್ಥಿಗಳನ್ನು ಕರೆತಂದು ಭಾಷಣ ಮಾಡಿಸಬಾರದು ಹಾಗೂ ಭಾಷಣಕಾರರು ರಾಜಕೀಯವಾಗಿ ಮಾತನಾಡದಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

‘ಮಹಾನ್ ವ್ಯಕ್ತಿಗಳ ಜಯಂತಿಯನ್ನು ಕೇವಲ ಒಂದು ವರ್ಗ ಮತ್ತು ಒಂದು ಸ್ಥಳಕ್ಕೆ ಸೀಮಿತಗೊಳಿಸಬಾರದು. ಅಂದು ಎಲ್ಲ ಅಧಿಕಾರಿಗಳು ಖುದ್ದು ಹಾಜರಿರಬೇಕು. ಮಹಾಪುರುಷರ ಪ್ರತಿಮೆ, ಪುತ್ಥಳಿಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು’ ಎಂದು ಹೇಳಿದರು.

ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜರಾಂ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಂಗೇಗೌಡ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.