
ಪ್ರಜಾವಾಣಿ ವಾರ್ತೆಮೈಸೂರು: ಅಧಿಕಾರ ವಹಿಸಿಕೊಂಡ ಕೇವಲ 29 ದಿನಗಳಲ್ಲಿ ತಮ್ಮನ್ನು ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಬಿ.ಶರತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯಾಧಿಕರಣ (ಸಿಎಟಿ) ಅ.14ಕ್ಕೆ ಮುಂದೂಡಿದೆ.
ಹೀಗಾಗಿ, ಈಗಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರುಇನ್ನು ಏಳು ದಿನನಿರಾತಂಕವಾಗಿ ಕಾರ್ಯನಿರ್ವಹಿಸಬಹುದಾಗಿದೆ.
ಅವಧಿ ಪೂರ್ಣಗೊಳಿಸುವ ಮುನ್ನವೇ ವರ್ಗಾವಣೆ ಮಾಡಿರುವ ಕಾರಣಆದೇಶವನ್ನು ತಡೆ ಹಿಡಿಯುವಂತೆ ಐಎಎಸ್ ಅಧಿಕಾರಿ ಶರತ್‌ಮನವಿ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.