ದೇಬೂರು ಸಿದ್ದಲಿಂಗಪ್ಪ
ನಂಜನಗೂಡು: ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಆಶ್ರಯ ಸಮಿತಿ ಮಾಜಿ ಅಧ್ಯಕ್ಷ ದೇಬೂರು ಸಿದ್ದಲಿಂಗಪ್ಪ (74) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ದೇಬೂರು ಗ್ರಾಮದಲ್ಲಿ ನಡೆಯಿತು.
ಶಾಸಕ ದರ್ಶನ್ ಧ್ರುವನಾರಾಯಣ, ಮಾಜಿ ಶಾಸಕರಾದ ಬಿ.ಹರ್ಷವರ್ಧನ್, ಕಳಲೆ ಕೇಶವಮೂರ್ತಿ, ನಗರಸಭೆ ಅಧ್ಯಕ್ಷ ಶ್ರೀಕಂಠ ಸ್ವಾಮಿ, ಎಸ್.ಮಹದೇವಯ್ಯ, ಕುರಹಟ್ಟಿ ಮಹೇಶ್, ಸಿ.ಎಂ.ಶಂಕರ್, ಶ್ರೀಕಂಠನಾಯಕ, ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಸಿಂಧುವಳ್ಳಿ ಕೆಂಪಣ್ಣ ಮೃತರ ಅಂತಿಮ ದರ್ಶನ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.