ಮೈಸೂರು: ‘ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಬಗ್ಗೆ ಮಾರ್ಚ್ 9ರಂದು ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಅರವಿಂದ ಲಿಂಬಾವಳಿ ಶುಕ್ರವಾರ ರಾತ್ರಿ ಇಲ್ಲಿ ತಿಳಿಸಿದರು.
‘ಕೋವಿಡ್–19 ಹರಡುವಿಕೆ ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ನಗರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.
‘ಮಡಿಕೇರಿಗೆ ಶನಿವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಭೇಟಿ ನೀಡಲಿದ್ದಾರೆ. ಇಲಾಖೆಯ ಕಾರ್ಯಕ್ರಮವಾಗಿದ್ದರಿಂದ ಹಾಜರಿರಲು ತೆರಳುತ್ತಿರುವೆ. ಮಾರ್ಗಮಧ್ಯೆ ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದೆ’ ಎಂದು ಲಿಂಬಾವಳಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.