ಸರಗೂರು: ಎಚ್.ಡಿ. ಕೋಟೆ ಕ್ಷೇತ್ರದ ಶಾಸಕ ಅರಣ್ಯ ಮತ್ತು ವಸತಿ ವಿಹಾರಧಾಮ ಸಂಸ್ಥೆಗಳ ಅಧ್ಯಕ್ಷ ಅನಿಲ್ ಚಿಕ್ಕಮಾದು ಅವರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಚಿವ ಸ್ಥಾನ ನೀಡಬೇಕೆಂದು ತಾಲ್ಲೂಕು ಮೀನುಗಾರರ ಘಟಕದ ಅಧ್ಯಕ್ಷ ಇಟ್ನ ಬೆಟ್ಟನಾಯಕ ಒತ್ತಾಯಿಸಿದ್ದಾರೆ.
ಕ್ಷೇತ್ರದಲ್ಲಿ ಎರಡು ಬಾರಿ ಸತತವಾಗಿ ಗೆಲುವು ಸಾಧಿಸಿ, ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ. ಇಂಥವರಿಗೆ ಸಚಿವ ಸ್ಥಾನ ನೀಡಿದ್ದರೆ ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟೆಯನ್ನು ತೊಲಗಿಸಲು ಸಹಾಯಕವಾಗಬಹುದು. ಸಂಪುಟ ಸಭೆಯಲ್ಲಿ ರಾಜಣ್ಣ ಅವರ ರಾಜೀನಾಮೆಯಿಂದ ತೆರವಾದ ಸ್ಥಾನವನ್ನು ಅನಿಲ್ ಚಿಕ್ಕಮಾಧು ಅವರಿಗೆ ನೀಡಲು ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.