ADVERTISEMENT

ಮೈಸೂರು-ಗೋವಾ ರೈಲಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2022, 11:24 IST
Last Updated 12 ಸೆಪ್ಟೆಂಬರ್ 2022, 11:24 IST

ಮೈಸೂರು: ‘ಮೈಸೂರು-ಗೋವಾ ನಡುವೆ ರೈಲು ಪ್ರಯಾಣ ಆರಂಭಿಸಬೇಕು’ ಎಂದು ಒತ್ತಾಯಿಸಿ ಮೈಸೂರು ರೈಲ್ವೆ ಹೋರಾಟ ಸಮಿತಿಯವರು ಸಂಸದರೂ ಆಗಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ ಅವರಿಗೆ ಸೋಮವಾರ ಇಲ್ಲಿ ಮನವಿ ಸಲ್ಲಿಸಿದರು.

‘ಈ ಮಾರ್ಗದಲ್ಲಿ ಹಲವು ಧಾರ್ಮಿಕ ಹಾಗೂ ಪ್ರವಾಸಿ ಕ್ಷೇತ್ರಗಳಿವೆ. ರೈಲು ಸಂಚರಿಸಿದರೆ, ಪ್ರವಾಸೋದ್ಯಮ ಅಭಿವೃದ್ಧಿಯಾಗುತ್ತದೆ’ ಎಂದು ತಿಳಿಸಿದರು.

‘ಈ ವಿಚಾರವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಪ್ರತಾಪ್ ಸಿಂಹ ಅವರಿಗೂ ಮನವಿ ಸಲ್ಲಿಸಲಾಗಿದೆ. ಎಲ್ಲರೂ ಸೇರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಕೋರಿದರು.

ADVERTISEMENT

ಸಮಿತಿಯ ಮಹೇಶ್ ಕಾಮತ್, ರಘುವೀರ್ ಪುರಾಣಿಕ್, ಜಗದೀಶ್ ಹೆಬ್ಬಾರ್ ಹಾಗೂ ರಾಕೇಶ್ ಭಟ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.