ADVERTISEMENT

ಮೈಸೂರು: ಸಮರ್ಪಕ ಪರಿಹಾರಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 27 ಜನವರಿ 2023, 16:16 IST
Last Updated 27 ಜನವರಿ 2023, 16:16 IST

ಮೈಸೂರು: ‘ಕಾಡು ಪ್ರಾಣಿಗಳಿಂದ ಜನರನ್ನ ರಕ್ಷಿಸಬೇಕು ಹಾಗೂ ಮೃತರ ಕುಟುಂಬಗಳಿಗೆ ಸಮರ್ಪಕ ಪರಿಹಾರ ನೀಡಬೇಕು‘ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಜಿಲ್ಲಾ ಸಮಿತಿಯ ಕಾರ್ಯದರ್ಶಿ ಜಗದೀಶ್ ಸೂರ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಜಿಲ್ಲೆಯ ತಿ.ನರಸೀಪುರ, ಎಚ್‌.ಡಿ.ಕೋಟೆ ತಾಲ್ಲೂಕು ಸೇರಿದಂತೆ ಹಲವೆಡೆ ಜನರ ಮೇಲೆ ಹುಲಿ, ಚಿರತೆ ದಾಳಿ ಹೆಚ್ಚಾಗುತ್ತಿದೆ. ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಪ್ರಾಣಿಗಳು ಈಗ ಮನುಷ್ಯನ ಮೇಲೂ ದಾಳಿ ನಡೆಸಿ ಪ್ರಾಣ ತೆಗೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಡು ಪ್ರಾಣಿಗಳಿಂದ ಸಾವಿಗೀಡಾದವರ ಕುಟುಂಬಕ್ಕೆ ₹ 50 ಲಕ್ಷ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT