ADVERTISEMENT

ಕನ್ನಡದಲ್ಲಿ ಇಲ್ಲದ ಪರೀಕ್ಷೆ: ರೈಲ್ವೆ ನೇಮಕಾತಿ ಪರೀಕ್ಷೆ ರದ್ದತಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 7:55 IST
Last Updated 19 ಡಿಸೆಂಬರ್ 2025, 7:55 IST
ಎಸ್.ಕೆ.ರಾಜೂ ಗೌಡ
ಎಸ್.ಕೆ.ರಾಜೂ ಗೌಡ   

ತಿ.ನರಸೀಪುರ: ‘ಕೇಂದ್ರದ ರೈಲ್ವೆ ನೇಮಕಾತಿಯಲ್ಲಿ ಕನ್ನಡವನ್ನು ಕೈ ಬಿಟ್ಟು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಪರೀಕ್ಷೆ ನಡೆಸಿರುವುದು ಖಂಡನೀಯ’ ಎಂದು ಕನ್ನಡ ಸಾಂಸ್ಕೃತಿಕ ಪರಿಷತ್ ರಾಜ್ಯಾಧ್ಯಕ್ಷ ಎಸ್.ಕೆ.ರಾಜೂಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಈ ನಡೆ ಒಕ್ಕೂಟ ವ್ಯವಸ್ಥೆಗೆ ಮಾರಕ ಮತ್ತು ಕನ್ನಡಿಗರಿಗೆ ಮಾಡಿದ ಅನ್ಯಾಯ, ಅಪಮಾನವಾಗಿದೆ. ಇದನ್ನು ನಮ್ಮ ಸಂಘಟನೆಯು ಖಂಡಿಸುತ್ತದೆ’ ಎಂದು ಗುರುವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

‘ಇದರ ಬಗ್ಗೆ ಸಂಸತ್ತಿನಲ್ಲಿ ನಮ್ಮ ನಾಡಿನ ಸಂಸದರು ಯಾವುದೇ ಪ್ರತಿರೋಧ ವ್ಯಕ್ತಪಡಿಸಿಲ್ಲ, ಕೂಡಲೇ ಸಂಸದರು ಮತ್ತು ಸಚಿವರು ಈ ಬಗ್ಗೆ ಎಚ್ಚೆತ್ತುಕೊಂಡು ಸಂಬಂಧಿಸಿದವರ ಜೊತೆಗೆ ವ್ಯವಹರಿಸಿ ಕನ್ನಡ ಕೈ ಬಿಟ್ಟು ನಡೆಸಿರುವ ರೈಲ್ವೆ ನೇಮಕಾತಿ ಪರೀಕ್ಷೆಯನ್ನು ಕೂಡಲೇ ರದ್ದುಮಾಡಿ ಹೊಸದಾಗಿ ಕನ್ನಡದಲ್ಲಿಯೂ ಪರೀಕ್ಷೆಯನ್ನು ನಡೆಸಬೇಕು. ಜತೆಗೆ ರಾಜ್ಯ ಸರ್ಕಾರವು ವಿಧಾನಸಭೆಯ ಅಧಿವೇಶನದಲ್ಲಿ ಈ ಬಗ್ಗೆ ಖಂಡನಾ ನಿರ್ಣಯ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.