ನಂಜನಗೂಡು: ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವ ಸ್ಥಾನ ನೀಡಬೇಕು ಎಂದು ಉಪ್ಪಾರ ಸಂಘದ ಜಿಲ್ಲಾಧ್ಯಕ್ಷ ಕರಳಪುರ ನಾಗರಾಜು ಒತ್ತಾಯಿಸಿದ್ದಾರೆ.
ರಾಜ್ಯ ಸಚಿವ ಸಂಪುಟದಲ್ಲಿ ಎರಡು ಸ್ಥಾನಗಳು ಖಾಲಿ ಇದ್ದು, ಇದೀಗ ಸಚಿವ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯ ಎತ್ತಿ ಹಿಡಿಯಬೇಕು ಎಂದು ಕೋರಿದ್ದಾರೆ.
ಪುಟ್ಟರಂಗಶೆಟ್ಟಿ ಓರ್ವ ನಿಷ್ಠಾವಂತ ರಾಜಕಾರಣಿ. ಸತತವಾಗಿ 4ನೇ ಬಾರಿ ಚುನಾಯಿತರಾಗಿದ್ದಾರೆ. ಈ ಹಿಂದೆ ಮಹಾದೇವ ಪ್ರಸಾದ್ ಹೊರತುಪಡಿಸಿದರೆ, ಚಾಮರಾಜಗರ ಜಿಲ್ಲೆಯ ಯಾರಿಗೂ ಮಂತ್ರಿ ಸ್ಥಾನ ಲಭಿಸಿಲ್ಲ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.