ADVERTISEMENT

ಬಂಧನ ದ್ವೇಷದ ರಾಜಕಾರಣವಲ್ಲ; ಅಶೋಕ್

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2019, 12:02 IST
Last Updated 22 ಆಗಸ್ಟ್ 2019, 12:02 IST

ಮೈಸೂರು: ‘ಕಾಂಗ್ರೆಸ್ ಮುಖಂಡ ಚಿದಂಬರಂ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿಲ್ಲ’ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.

‘ಚಿದಂಬರಂ ಕೇಂದ್ರ ಗೃಹ ಸಚಿವರಿದ್ದ ಸಂದರ್ಭ ಅಮಿತ್ ಶಾ ಬಂಧನಕ್ಕೆ ಸೂಚಿಸಿದ್ದರು. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯ ಜಾಮೀನು ನಿರಾಕರಿಸಿದ್ದರಿಂದ, ಸಿಬಿಐ ಚಿದಂಬರಂ ಅವರನ್ನು ಬಂಧಿಸಿದೆ. ಇದರಲ್ಲಿ ಯಾವುದೇ ದ್ವೇಷವಿಲ್ಲ’ ಎಂದು ಗುರುವಾರ ನೆರೆ ಸಂತ್ರಸ್ತರ ಅಹವಾಲು ಆಲಿಸಿದ ಬಳಿಕ, ಹುಣಸೂರು ತಾಲ್ಲೂಕಿನ ನಿಲವಾಗಿಲು ಗ್ರಾಮದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.

‘ಬಿಜೆಪಿ ಹಿಂದೂತ್ವ ಒಪ್ಪಿಕೊಂಡಿದೆ. ರಾಜ್ಯ ಘಟಕದ ನೂತನ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ‘ಮಂಗಳೂರು ಮಾದರಿ’ಯಲ್ಲಿ ಪಕ್ಷ ಸಂಘಟಿಸುವುದಾಗಿ ಹೇಳಿರುವುದಕ್ಕೆ ಬೇರೆ ಅರ್ಥ ಕಲ್ಪಿಸಿಕೊಳ್ಳಬೇಕಿಲ್ಲ. ಮೋದಿ ಸೂಚನೆಯಂತೆ ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಬಲದಿಂದ, ಪಕ್ಷದ ಹೆಸರಿನಲ್ಲಿ ಚುನಾವಣೆ ಗೆಲ್ಲುವ ಸಾಮರ್ಥ್ಯ ಸಂಘಟಿಸುವುದೇ ನಮ್ಮ ಗುರಿಯಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.