ಮೈಸೂರು: ತಮಿಳುನಾಡು ಸರ್ಕಾರದ 2024ನೇ ಸಾಲಿನ ‘ವೈಕಂ’ ಪ್ರಶಸ್ತಿಗೆ ಸಾಹಿತಿ ದೇವನೂರ ಮಹಾದೇವ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₹5 ಲಕ್ಷ ನಗದು ಹಾಗೂ ಸ್ವರ್ಣಲೇಪಿತ ಪದಕವನ್ನು ಒಳಗೊಂಡಿದೆ. ಗುರುವಾರ (ಡಿ.12) ಕೇರಳದ ವೈಕಂನಲ್ಲಿ ನಡೆಯಲಿರುವ, ವೈಕಂ ಹೋರಾಟದಲ್ಲಿ ಪೆರಿಯಾರ್ ಪಾಲ್ಗೊಂಡಿದ್ದರ ಶತಮಾನೋತ್ಸವ ಸಮಾರೋಪ ಸಮಾರಂಭ ಹಾಗೂ ಪೆರಿಯಾರ್ ಸ್ಮಾರಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪಾಲ್ಗೊಳ್ಳಲಿದ್ದಾರೆ.
ದೇಶದಾದ್ಯಂತ ತುಳಿತಕ್ಕೆ ಒಳಗಾದ ವರ್ಗಗಳ ಕಲ್ಯಾಣಕ್ಕೆ ಶ್ರಮಿಸುವ ವ್ಯಕ್ತಿಗಳು ಹಾಗೂ ಸಂಘ–ಸಂಸ್ಥೆಗಳಿಗೆ ತಮಿಳುನಾಡು ಸರ್ಕಾರವು ಈ ಪ್ರಶಸ್ತಿ ನೀಡುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.