ADVERTISEMENT

ಹುಣಸೂರು | ಗೊಮ್ಮಟಗಿರಿ ಅಭಿವೃದ್ಧಿಗೆ ₹10 ಕೋಟಿ ಪ್ರಸ್ತಾವನೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2025, 3:02 IST
Last Updated 11 ಆಗಸ್ಟ್ 2025, 3:02 IST
ಹುಣಸೂರು ತಾಲ್ಲೂಕಿನ ಬಿಳಿಕೆರೆ ಹೋಬಳಿ ಬೆಟ್ಟದೂರಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜಿ.ಡಿ.ಹರೀಶ್‌ ಗೌಡ ಭೂಮಿ ಪೂಜೆ ನೆರವೇರಿಸಿದರು. ಕೆ.ಎಸ್.ಕುಮಾರ್‌, ಮಹೇಶ್‌ ಪಾಲ್ಗೊಂಡಿದ್ದರು
ಹುಣಸೂರು ತಾಲ್ಲೂಕಿನ ಬಿಳಿಕೆರೆ ಹೋಬಳಿ ಬೆಟ್ಟದೂರಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜಿ.ಡಿ.ಹರೀಶ್‌ ಗೌಡ ಭೂಮಿ ಪೂಜೆ ನೆರವೇರಿಸಿದರು. ಕೆ.ಎಸ್.ಕುಮಾರ್‌, ಮಹೇಶ್‌ ಪಾಲ್ಗೊಂಡಿದ್ದರು   

ಹುಣಸೂರು: ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧವಾದ ಗೊಮ್ಮಟಗಿರಿಯ ಗೊಮ್ಮಟೇಶ್ವರ ಶ್ರೀಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ₹ 2 ಕೋಟಿ ಬಿಡುಗಡೆ ಮಾಡಿದ್ದು, ಸರ್ಕಾರಕ್ಕೆ ₹ 10 ಕೋಟಿ ಅನುದಾನದ ಬೇಡಿಕೆ ಇಡಲಾಗಿದೆ ಎಂದು ಶಾಸಕ ಜಿ.ಡಿ.ಹರೀಶ್‌ ಗೌಡ ಹೇಳಿದರು.

ತಾಲ್ಲೂಕಿನ ಬಿಳಿಕೆರೆ ಹೋಬಳಿ ಬೆಟ್ಟದೂರಿನಲ್ಲಿ ₹ 40 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬೆಟ್ಟದೂರಿಗೆ ಹೊಂದಿಕೊಂಡಿರುವ ಗೊಮಟ್ಟಗಿರಿ ವೀಕ್ಷಣೆಗೆ ರಾಜ್ಯ ಮತ್ತು ಹೊರ ರಾಜ್ಯದಿಂದ ಭಕ್ತರು ಬಂದು ಹೋಗುತ್ತಿದ್ದಾರೆ. ಈ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ತರಲು ಪ್ರಯತ್ನಿಸಲಾಗುವುದು ಎಂದರು.

ಗೊಮ್ಮಟಗಿರಿ ಅಭಿವೃದ್ಧಿಗೆ ಅಂದಾಜು ವೆಚ್ಚದ ಪ್ರಸ್ತಾವನೆ ಪ್ರವಾಸೋದ್ಯಮಕ್ಕೆ ಸಲ್ಲಿಸಿದೆ. ಸರ್ಕಾರ ಮೊದಲ ಹಂತದಲ್ಲಿ ₹ 2 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಕ್ಷೇತ್ರದ ಅಭಿವೃದ್ಧಿಗೆ ಭಕ್ತರಿಂದಲ್ಲೂ ಆರ್ಥಿಕ ಸಹಾಯ ಸಂಗ್ರಹಿಸಲು ಆಡಳಿತ ಮಂಡಳಿಗೆ ಮನವಿ ಮಾಡಿದ್ದೇನೆ. ಸಂಪನ್ಮೂಲ ಕೃಢೀಕರಿಸಿದ ಬಳಿಕ ಅಭಿವೃದ್ಧಿ ಕಾಮಗಾರಿ ಹಂತ ಹಂತವಾಗಿ ಸಂಪೂರ್ಣ ಅಭಿವೃದ್ಧಿಗೆ ಒತ್ತು ನೀಡಲು ಬದ್ಧ ಎಂದರು.

ADVERTISEMENT

ಕೆರೆ ಕಟ್ಟೆಗೆ ನೀರು: ತಾಲ್ಲೂಕಿನ ಲಕ್ಷ್ಮಣತೀರ್ಥ ನದಿಯಿಂದ ಏತ ನೀರಾವರಿ ಯೋಜನೆ ಮೂಲಕ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಸಂಬಂಧಿಸಿದ ಇಲಾಖೆಗೆ ಸೂಚಿಸಿದೆ. ಬಿಳಿಕೆರೆ ಮತ್ತು ಬನ್ನಿಕುಪ್ಪೆ, ಸೋಮನಹಳ್ಳಿ ಕೆರೆಗಳಿಗೆ ಏತ ನೀರಾವರಿ ಮೂಲಕ ನೀರು ತುಂಬಿಸಲು ಹೊಸದಾಗಿ ಮೋಟಾರ್‌ ಅಳವಡಿಸಿ ಕ್ರಮವಹಿಸಿದೆ ಎಂದರು.

ಕೆ.ಎಂ.ಎಫ್ ನಿರ್ದೇಶಕ ಕೆ.ಎಸ್.ಕುಮಾರ್‌, ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್‌,ಶೃತಿ, ಮರಿಗೌಡ, ಅಶೋಕ್‌, ಸುಂದರ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.