ಜಯಪುರ: ಜಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಮಚನಹಳ್ಳಿ ಗ್ರಾಮದಲ್ಲಿ ಮೈಸೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಧಾರ್ತಿ ಅಭಾ ಜನಭಾಗಿದಾರಿ ಅಭಿಯಾನವನ್ನು ಜಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಮಾದೇವಯ್ಯ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ, ಔಷಧಿ ವಿತರಣೆ ಮಾಡಿದರು. ಪಿಎಂ ಕಿಸಾನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವೃದ್ಧಾಪ್ಯ ಪಿಂಚಣಿ, ಸುಕನ್ಯಾ ಸಮೃದ್ಧಿ ಕಾರ್ಡ್, ಆಯುಷ್ಮಾನ್ ಭಾರತ್ ಕಾರ್ಡ್, ಜನ್ ಧನ್ ಬ್ಯಾಂಕ್ ಖಾತೆ, ಸರ್ಕಾರಿ ವಿಮಾ ಸೌಲಭ್ಯ, ಪಡಿತರ ಚೀಟಿ ಹೆಸರು ಸೇರ್ಪಡೆ ಮತ್ತು ತಿದ್ದುಪಡಿ, ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ ಮಾಡಿ ಸ್ಥಳದಲ್ಲಿಯೇ ಸವಲತ್ತು ವಿತರಣೆ ಮಾಡಿದರು.
ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಬಿ.ಅರುಣ್ ಪ್ರಭು, ಜಯಪುರ ಗ್ರಾಮ ಪಂಚಾಯಿತಿ ಸದಸ್ಯರಾದ ನವೀನಮ್ಮ ಚಿಕ್ಕಣ್ಣ, ಪಿಡಿಒ ಬಸವಣ್ಣ, ಎಸ್.ಕಲ್ಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಚಂಪಾ, ಜಯಪುರ ರೈತ ಸಂಪರ್ಕ ಕೇಂದ್ರ ಕೃಷಿ ಅಧಿಕಾರಿ ಅರುಣಾ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.