ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ
ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ (ದಿಶಾ) ಸಭೆಗೆ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಗೈರುಹಾಜರಾದರು.
ಕುಮಾರಸ್ವಾಮಿ ಅವರೊಂದಿಗೆ ಅಂತರ ಕಾಯ್ದುಕೊಂಡಿರುವ ದೇವೇಗೌಡ ಸಭೆಯಿಂದ ದೂರ ಉಳಿದರು. ಆದರೆ ಅವರ ಪುತ್ರ, ಹುಣಸೂರು ಶಾಸಕ ಜಿ.ಡಿ. ಹರೀಶ್ ಗೌಡ ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ಪತ್ರಕರ್ತರೊಂದಿಗೆ ಮಾತಾನಾಡಿದ ಕುಮಾರಸ್ವಾಮಿ, ಜಿಟಿಡಿ-ಜೆಡಿಎಸ್ ಸಂಬಂಧ ಗಂಡ-ಹೆಂಡತಿ ಸಂಬಂಧದಂತೆ. ಉಂಡು ಮಲಗುವವರೆಗೆ ಮಾತ್ರವೇ ಜಗಳ ಇರುತ್ತದೆ. ನಂತರ ಎಲ್ಲವೂ ಸರಿಯಾಗುತ್ತದೆ. ಅವರು ಕಾಂಗ್ರೆಸ್‌ಗೆ ಹೋಗುವುದಿಲ್ಲ. ನಮ್ಮೊಂದಿಗೇ ಇರುತ್ತಾರೆ. ಮುನಿಸು ಇದ್ದ ಮಾತ್ರಕ್ಕೆ ನಮ್ಮನ್ನು ಬಿಟ್ಟು ಹೋಗುತ್ತಾರೆ ಎಂದರ್ಥವಲ್ಲ ಎಂದು ಹೇಳಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ದಿಶಾ ಸಭೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.