ADVERTISEMENT

ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2025, 16:51 IST
Last Updated 3 ಏಪ್ರಿಲ್ 2025, 16:51 IST

ನಂಜನಗೂಡು: ‘ತಾಲ್ಲೂಕಿನಲ್ಲಿ ಪೂರ್ವ ಮುಂಗಾರು ಹಂಗಾಮಿಗೆ ಅವಶ್ಯಕತೆ ಇರುವ ಹೆಸರು, ಉದ್ದು, ಅಲಸಂದೆ, ಜೋಳ, ಮೆಕ್ಕೆಜೋಳ, ಸೂರ್ಯಕಾಂತಿ ಬೆಳೆಯ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದ್ದು, ರೈತರಿಗೆ ಸಹಾಯಧನದಲ್ಲಿ ವಿತರಣೆ ಮಾಡಲಾಗುವುದು’ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಕೆ.ರವಿ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾನ್ಯ ವರ್ಗದ ರೈತರಿಗೆ ಶೇ 50 ರಷ್ಟು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಶೇ 75 ರಷ್ಟು ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣೆ ಮಾಡಲಾಗುವುದು. ರೈತರು ಆಧಾರ್ ಪ್ರತಿ ಹಾಗೂ ಪಹಣಿಯೊಂದಿಗೆ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

ರೈತರು ಬಿತ್ತನೆಗೆ ಮುಂಚೆ ಬೀಜೋಪಚಾರ ಕೈಗೊಂಡಲ್ಲಿ ಅನೇಕ ಕೀಟ ಹಾಗೂ ರೋಗದಿಂದ ಬೆಳೆ ರಕ್ಷಿಸಿಕೊಳ್ಳಬಹುದು, ಜೊತೆಗೆ ಹೆಚ್ಚಿನ ಇಳುವರಿ ಪಡೆಯಬಹುದಾಗಿದೆ. ಬೀಜೋಪಚಾರ ಕ್ರಮಗಳಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ತಾಂತ್ರಿಕ ಮಾಹಿತಿ ಪಡೆದುಕೊಳ್ಳಬೇಕು ಎಂದು  ಕೋರಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.