
ಮೈಸೂರು: ‘ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರೂ ಆಗಿದ್ದಾರೆ. ಅಸ್ಸಾಂ ಚುನಾವಣಾ ವೀಕ್ಷಕರೂ ಆಗಿದ್ದಾರೆ. ಈ ಬಗ್ಗೆ ಚರ್ಚಿಸಲು ನವದೆಹಲಿಗೆ ಹೋಗಿದ್ದಾರಷ್ಟೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ’ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.
ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘2028ರವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ’ ಎಂದರು.
‘ಬಿಜೆಪಿಯವರು ಏನೋ ಆಗುತ್ತದೆ ಎಂದು ಸುಮ್ಮನೆ ಕಾಯುತ್ತಿದ್ದಾರೆ. ಅವರು ಯಾವಾಗಲೂ ರಾಜ್ಯದಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿಲ್ಲ. ಹೀಗಾಗಿ ಏನಾದರೂ ಸಂದರ್ಭ ಕಾಯುತ್ತಿರುತ್ತಾರೆ. ನಂತರ ಕೈಗೆಟುಕದ ದ್ರಾಕ್ಷಿ ಹುಳಿ ಎಂದುಕೊಂಡು ಹೋಗುತ್ತಾರೆ. ಈಗ ಆಗುತ್ತಿರುವುದೂ ಅಷ್ಟೇ’ ಎಂದು ಟೀಕಿಸಿದರು.
‘ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ– ಜೆಡಿಎಸ್‌ನವರು ಅನಧಿಕೃತವಾಗಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಈಗ ಅಧಿಕೃತವಾಗಿ ಜೊತೆಗಿದ್ದಾರೆ. ಇದರಿಂದಾಗಿ, ನಗರ ಸ್ಥಳೀಯ ಸಂಸ್ಥೆ ಸೇರಿದಂತೆ ಯಾವುದೇ ಚುನಾವಣೆಯಲ್ಲೂ ಕಾಂಗ್ರೆಸ್ ಮೇಲೆ ವ್ಯತಿರಿಕ್ತ ಪರಿಣಾಮವೇನೂ ಆಗುವುದಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.