ADVERTISEMENT

ಮುಂದುವರಿದ ನಿವಾಸಿ ವೈದ್ಯರ ಕಪ್ಪುಪಟ್ಟಿ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 7 ಮೇ 2020, 10:25 IST
Last Updated 7 ಮೇ 2020, 10:25 IST
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ನಿವಾಸಿ ವೈದ್ಯರು ಬುಧವಾರವೂ ಕಪ್ಪುಪಟ್ಟಿ ಧರಿಸಿ ಕಾರ್ಯನಿರ್ವಹಿಸುವ ಮೂಲಕ ಶಿಷ್ಯ ವೇತನ ಹೆಚ್ಚಳಕ್ಕೆ ಆಗ್ರಹಿಸಿದರು
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ನಿವಾಸಿ ವೈದ್ಯರು ಬುಧವಾರವೂ ಕಪ್ಪುಪಟ್ಟಿ ಧರಿಸಿ ಕಾರ್ಯನಿರ್ವಹಿಸುವ ಮೂಲಕ ಶಿಷ್ಯ ವೇತನ ಹೆಚ್ಚಳಕ್ಕೆ ಆಗ್ರಹಿಸಿದರು   

ಮೈಸೂರು: ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹೆಚ್ಚಿಸಬೇಕು ಎಂದು ಆಗ್ರಹಿಸಿ ನಿವಾಸಿ ವೈದ್ಯರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಕಪ್ಪುಪಟ್ಟಿ ಪ್ರದರ್ಶನ ಬುಧವಾರವೂ ಮುಂದುವರಿದಿದೆ.

ಮೈಸೂರು ವೈದ್ಯಕೀಯ ಕಾಲೇಜು ಸಂಶೋಧನಾ ಕೇಂದ್ರದ ನಿವಾಸಿ ವೈದ್ಯರು ಕಪ್ಪುಪಟ್ಟಿ ಧರಿಸಿ ಬುಧವಾರ ಕಾರ್ಯನಿರ್ವಹಿಸುವ ಮೂಲಕ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಸಂಘದ ಉಪಾಧ್ಯಕ್ಷ ಡಾ.ಡಿ.ಎನ್.ಪುನೀತ್, ‘ಇದುವರೆಗೂ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲೆಯ 450 ಮಂದಿ ವೈದ್ಯರು ಕಪ್ಪುಪಟ್ಟಿ ಧರಿಸಿ ಕಾರ್ಯನಿರ್ವಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.