
ಡಿ.ಆರ್. ಪಾಟೀಲ
ಮೈಸೂರು: ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಹಾಗೂ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್. ಪಾಟೀಲ ಜ.11ರಿಂದ 12ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
11ರಂದು ಬೆಳಿಗ್ಗೆ ರೈಲಿನಲ್ಲಿ ಬರುವ ಅವರು, ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4ಕ್ಕೆ ನಂಜನಗೂಡು ತಾಲ್ಲೂಕು ಬದನವಾಳು ಗ್ರಾಮದ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ‘ಗ್ರಾಮೋದಯ ಪರಿಕಲ್ಪನೆ’ ಸಂವಾದ ಕಾರ್ಯಕ್ರಮ, ಸಂಜೆ 6ಕ್ಕೆ ಅಲ್ಲಿನ ಗ್ರಾಮ ಪಂಚಾಯಿತಿ ಸಭೆಯಲ್ಲಿ ಭಾಗವಹಿಸುವರು. ಅಲ್ಲೇ ವಾಸ್ತವ್ಯ ಹೂಡುವರು.
12ರಂದು ಬೆಳಿಗ್ಗೆ 10ಕ್ಕೆ ಹಾಗೂ ಮಧ್ಯಾಹ್ನ 12ಕ್ಕೆ ನಂಜನಗೂಡು ತಾಲ್ಲೂಕಿನ ಗ್ರಾಮ ಸಭೆಗಳಲ್ಲಿ ಭಾಗವಹಿಸುವರು. ಬಳಿಕ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ತೆರೆಳುವರು. ಸಂಜೆ 7ಕ್ಕೆ ನಗರದ ಯಾದವಗಿರಿಯಲ್ಲಿರುವ ಶ್ರೀರಾಮಕೃಷ್ಣ ಆಶ್ರಮದ ಕಾರ್ಯಕ್ರಮದಲ್ಲಿ ಭಾಗವಹಿಸಿ ಇಲ್ಲೇ ವಾಸ್ತವ್ಯ ಹೂಡುವರು. 13ರಂದು ಬೆಳಿಗ್ಗೆ 9ಕ್ಕೆ ಶ್ರೀರಂಗಪಟ್ಟಣಕ್ಕೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.