ADVERTISEMENT

ನಂಜನಗೂಡು: ಕುಡಿಯುವ ನೀರಿಗೆ ಆಗ್ರಹಿಸಿ ಪ್ರತಿಭಟನೆ

ಹೆಡತಲೆ ಗ್ರಾಮ ಪಂಚಾಯಿತಿಗೆ ಬಸವಟ್ಟಿಗೆ ಗ್ರಾಮಸ್ಥರ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2026, 2:55 IST
Last Updated 20 ಫೆಬ್ರುವರಿ 2026, 2:55 IST
<div class="paragraphs"><p>ನಂಜನಗೂಡು ತಾಲ್ಲೂಕಿನ ಬಸವಟ್ಟಿಗೆ ಗ್ರಾಮಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಬುಧವಾರ ಗ್ರಾಮಸ್ಥರು ಹೆಡತಲೆ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು</p></div>

ನಂಜನಗೂಡು ತಾಲ್ಲೂಕಿನ ಬಸವಟ್ಟಿಗೆ ಗ್ರಾಮಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಬುಧವಾರ ಗ್ರಾಮಸ್ಥರು ಹೆಡತಲೆ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು

   

ನಂಜನಗೂಡು: ತಾಲ್ಲೂಕಿನ ಬಸವಟ್ಟಿಗೆ ಗ್ರಾಮದಲ್ಲಿ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಮರ್ಪಕ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಬುಧವಾರ ಹೆಡತಲೆ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಜವರಯ್ಯ ಮಾತನಾಡಿ, ‘ಗ್ರಾಮದಲ್ಲಿ ಎರಡು ವರ್ಷಗಳಿಂದ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪರಿತಪ್ಪಿಸುತ್ತಿದ್ದು, ಮೂರು ದಿನಗಳಿಗೊಮ್ಮೆ ಒಂದು ಬಾರಿ ನೀರು ಬಿಡುತ್ತಿದ್ದಾರೆ.  ಜಲಜೀವನ್ ಮಿಷನ್ ಪೈಪ್‌ಲೈನ್ ಅಳವಡಿಸಿ ಎರಡು ವರ್ಷಗಳಾದರೂ ಕುಡಿಯುವ ನೀರು ಮಾತ್ರ ಸರಬರಾಜು ಆಗುತ್ತಿಲ್ಲ. ಮೂರು ದಿನಗಳಿಗೊಮ್ಮೆ ಕೇವಲ ಅರ್ಧ ಗಂಟೆ ಮಾತ್ರ ನೀರನ್ನು ಬಿಡುತ್ತಿರುವುದರಿಂದ ಕುಡಿಯುವ ನೀರಿಗೆ ತೊಂದರೆ ಆಗಿದೆ. ಸಮಸ್ಯೆಯನ್ನು ಬಗೆಹರಿಸುವಂತೆ ಸಾಕಷ್ಟು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ’ ಎಂದು ಆರೋಪಿಸಿದರು.

ADVERTISEMENT

‘ಇತ್ತೀಚೆಗೆ ಕಸ ಸಂಗ್ರಹಣೆ ವಾಹನವೂ ಬರುತ್ತಿಲ್ಲ. ಕೂಡಲೇ ನೀರಿಗೆ ಸಮಸ್ಯೆಯನ್ನು ಬಗೆಹರಿಸಬೇಕು, ₹70 ಲಕ್ಷ ವೆಚ್ಚದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕಾಮಗಾರಿ ನಡೆಸಿದ್ದರೂ ಕಾಮಗಾರಿ ಪೂರ್ಣಗೊಂಡಿಲ್ಲ, ಆದರೂ ಗ್ರಾಮ ಪಂಚಾಯಿತಿಗೆ ಸುಪರ್ದಿಗೆ ತೆಗೆದುಕೊಂಡಿದ್ದಾರೆ. ಕಾಮಗಾರಿ ಪ್ರಾರಂಭಿಸಿ ಎರಡು ವರ್ಷಗಳಾದರೂ  ಜೆಜೆಎಂ ಯೋಜನೆಯ ನಲ್ಲಿಗಳು ತುಕ್ಕು ಹಿಡಿದು, ಮುರಿದು ಬಿದ್ದಿವೆ. ಇದನ್ನು ಸರಿಪಡಿಸುವಂತೆ ಗ್ರಾಮ ನೈರ್ಮಲ್ಯ ಮತ್ತು ಕುಡಿಯುವ ನೀರು ಇಲಾಖೆಯ ಎಇಇ ಮನು, ಪಿಡಿಒ ರಾಜಶೇಖರ್ ಅವರ ಗಮನಕ್ಕೆ ತಂದಿದ್ದರೂ ಅವರು ಉಡಾಫೆಯಿಂದ ಉತ್ತರಿಸುತ್ತಿದ್ದಾರೆ. ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಇಒ ಭೇಟಿ ನೀಡುವ ತನಕವೂ ಹೋರಾಟ ನಿಲ್ಲಿಸುವುದಿಲ್ಲ’ ಎಂದು ಪಟ್ಟುಹಿಡಿದರು.

‘ಗ್ರಾಮಸ್ಥರ ಸಮಸ್ಯೆಗಳನ್ನು ಬಗೆಹರಿಸಲು ಕಾಲಹರಣ ಮಾಡುತ್ತಿರುವ ಪಿಡಿಒ ರಾಜಶೇಖರ್ ಅವರನ್ನು ಕೂಡಲೇ ವರ್ಗಾವಣೆ ಮಾಡಿ ಶಿಸ್ತು ಕ್ರಮ ಕೈಗೊಳ್ಳಬೇಕು, ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಬಸವಟ್ಟಿಗೆ ನಾಗೇಂದ್ರ, ದಸಂಸ ವಿಭಾಗೀಯ ಸಂಘಟನಾ ಸಂಚಾಲಕ ಪಿ.ಕೃಷ್ಣಮೂರ್ತಿ, ದಸಂಸ ತಾಲ್ಲೂಕು ಸಂಘಟನಾ ಸಂಚಾಲಕ ಪಿ.ಕೃಷ್ಣಮೂರ್ತಿ, ನಂದೀಶ್, ಪ್ರತಾಪ್ ಕುಮಾರ್, ಶಿವಮೂರ್ತಿ, ಮಹೇಂದ್ರ, ಚನ್ನಬಸಮ್ಮ, ಶಾಂತಮ್ಮ, ಗೌರಮ್ಮ, ನಾಗಮ್ಮ, ಮಹದೇವಸ್ವಾಮಿ, ಶಿವಣ್ಣ, ವೆಂಕಟಯ್ಯ, ಸೋಮಶೇಖರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.