ADVERTISEMENT

ಸ್ನೇಹ ಬೆಳೆಸುವ ಮುನ್ನ ಎಚ್ಚರಿಕೆ ಅಗತ್ಯ

ಮಾದಕ ವಸ್ತು ಜಾಗೃತಿ ಅಭಿಯಾನ:

​ಪ್ರಜಾವಾಣಿ ವಾರ್ತೆ
Published 28 ಜೂನ್ 2025, 15:59 IST
Last Updated 28 ಜೂನ್ 2025, 15:59 IST
ಹುಣಸೂರು ತಾಲ್ಲೂಕಿನ ಹನಗೋಡು ಹೋಬಳಿ ಕೇಂದ್ರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣೆ ಸರ್ಕಲ್‌ ಇನ್‌ಸ್ಪೆಕ್ಟರ್‌ ಮುನಿಯಪ್ಪ ಮಾದಕ ವಸ್ತು ಕುರಿತು ಜಾಗೃತಿ ಮೂಡಿಸಿದರು
ಹುಣಸೂರು ತಾಲ್ಲೂಕಿನ ಹನಗೋಡು ಹೋಬಳಿ ಕೇಂದ್ರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣೆ ಸರ್ಕಲ್‌ ಇನ್‌ಸ್ಪೆಕ್ಟರ್‌ ಮುನಿಯಪ್ಪ ಮಾದಕ ವಸ್ತು ಕುರಿತು ಜಾಗೃತಿ ಮೂಡಿಸಿದರು   

ಹುಣಸೂರು: ಯುವಕರನ್ನು ಕೆಟ್ಟ ಚಟಗಳಿಗೆ ಬಲಿಮಾಡಿ ಬದುಕು ಕತ್ತಲೆಯಾಗಿಸುವ ಸಮಾಜಘಾತುಕ ಶಕ್ತಿಗಳಿದ್ದು, ಎಚ್ಚರಿಕೆ ನಡೆ ಅಗತ್ಯ ಎಂದು ಹುಣಸೂರು ಗ್ರಾಮಾಂತರ ಸರ್ಕಲ್‌ ಇನ್‌ಸ್ಪೆಕ್ಟರ್‌ ಮುನಿಯಪ್ಪ ಹೇಳಿದರು.

ತಾಲ್ಲೂಕಿನ ಹನಗೋಡು ಹೋಬಳಿ ಕೇಂದ್ರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ಮಾರಾಟ ಮತ್ತು ಸೇವನೆ ನಿಷೇಧ ಕುರಿತ ಜಾಗೃತಿ ಕಾರ್ಯಗಾರದಲ್ಲಿ ಮಾತನಾಡಿದರು. ವಿದ್ಯಾವಂತ ಯುವಕರು ಅಪರಿಚಿತರೊಂದಿಗೆ ಸ್ನೇಹ ಸಂಪರ್ಕ ಬೆಳೆಸುವ ಮುನ್ನ ಆ ವ್ಯಕ್ತಿಯ ಸಂಪೂರ್ಣ ಮಾಹಿತಿ ಪಡೆದು ನಂತರದಲ್ಲಿ ಸ್ನೇಹ ಬೆಳೆಸಬೇಕು ಎಂದರು.

ಶಾಲಾ–ಕಾಲೇಜು ಸುತ್ತ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆಯನ್ನು ಸರ್ಕಾರ ನಿಷೇಧಿಸಿದ್ದು, ಇದನ್ನು ಉಲ್ಲಂಘಿಸಿದವರ ಬಗ್ಗೆ ಮಾಹಿತಿ ನೀಡುವುದರಿಂದ ತಂಬಾಕು ಉತ್ಪನ್ನ ಮಾರಾಟಕ್ಕೆ ಕಡಿವಾಣ ಹಾಕಲು ಸಹಾಯವಾಗಲಿದೆ ಎಂದರು.

ADVERTISEMENT

ಕಾರ್ಯಕ್ರಮದಲ್ಲಿ ಪೋಕ್ಸೊ ಕಾಯ್ದೆ, ಸೈಬರ್‌ ಕ್ರೈಂ, ಕ್ರೆಡಿಟ್‌ ಮತ್ತು ಡೆಬಿಟ್‌ ಕಾರ್ಡ್‌ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಗ್ರಾಮಾಂತರ ಠಾಣೆ ಪಿಎಸ್‌ಐ ಬಸಪ್ಪ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.