ADVERTISEMENT

ಮಾದಕ ವಸ್ತು ಮಾರಾಟ: 4 ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 25 ಜನವರಿ 2026, 5:01 IST
Last Updated 25 ಜನವರಿ 2026, 5:01 IST
<div class="paragraphs"><p>ಜೈಲು (ಪ್ರಾತಿನಿಧಿಕ ಚಿತ್ರ)</p></div>

ಜೈಲು (ಪ್ರಾತಿನಿಧಿಕ ಚಿತ್ರ)

   

ಮೈಸೂರು: ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಶಾಂತಿನಗರದ ನಿವಾಸಿ ಮೊಹಮ್ಮದ್ ಅಕ್ಬರ್‌ ವಿರುದ್ಧದ ಆರೋಪ ಸಾಬೀತಾದ ಕಾರಣ 7ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಹಾಗೂ ₹ 40 ಸಾವಿರ ದಂಡ ವಿಧಿಸಿ ಆದೇಶಿಸಿದೆ.

ಅಕ್ಬರ್‌ ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದರು. ಆತನ ವಿರುದ್ಧ ಎನ್‌ಡಿಪಿಎಸ್‌ ಪ್ರಕರಣ ದಾಖಲಾಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.