ಎಚ್.ಡಿ.ಕೋಟೆ: ‘ಮದ್ಯಪಾನ ಮಾಡಿ ಪ್ರಯಾಣಿಕರಲ್ಲಿ ಆತಂಕ ಉಂಟು ಮಾಡಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಗೋಪಾಲಕೃಷ್ಣ ಮತ್ತು ನಿರ್ವಾಹಕ ಪ್ರಕಾಶ್ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಘಟಕದ ವ್ಯವಸ್ಥಾಪಕ ತ್ಯಾಗರಾಜ್ ತಿಳಿಸಿದ್ದಾರೆ.
ಮೈಸೂರಿಗೆ ತೆರಳುತಿದ್ದ ಸಾರಿಗೆ ಬಸ್ ಚಾಲಕ, ನಿರ್ವಾಹಕ ಮದ್ಯಪಾನ ಮಾಡಿರುವುದನ್ನು ಗಮನಿಸಿದ ಪ್ರಯಾಣಿಕರು, ಅರ್ಧದಲ್ಲೇ ಬಸ್ ನಿಲ್ಲಿಸಿ ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದರು. ಇಬ್ಬರನ್ನೂ ಪೊಲೀಸ್ ಠಾಣೆಗೆ ಕರೆತಂದು ದೂರು ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.