ಮೈಸೂರು: ಇಲ್ಲಿನ ಡಿವಿಜಿ ಬಳಗ ಪ್ರತಿಷ್ಠಾನದಿಂದ ನೀಡುವ 2024ನೇ ಸಾಲಿನ ‘ಡಿವಿಜಿ ಪ್ರಶಸ್ತಿ’ಗೆ ಕವಿ, ಚಿಂತಕ ಸತ್ಯೇಶ್ ಎನ್. ಬೆಳ್ಳೂರ್ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ₹15 ಸಾವಿರ ನಗದು ಒಳಗೊಂಡಿದೆ. ಸೆ.15ರಂದು ಬೆಳಿಗ್ಗೆ 10.30ಕ್ಕೆ ನಗರದ ಕೃಷ್ಣಮೂರ್ತಿಪುರಂನ ಶಾರದಾವಿಲಾಸ ಶತಮಾನೋತ್ಸವ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಶಿಕ್ಷಣ ತಜ್ಞ ಗುರುರಾಜ ಕರಜಗಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಕವಿ ಕೆ.ಸಿ. ಶಿವಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರತಿಷ್ಠಾನದ ಸಂಚಾಲಕ ಸಿ.ಕನಕರಾಜು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.