ADVERTISEMENT

ಹಿರಿಯರ ಮಾರ್ಗದರ್ಶನ ಅವಶ್ಯ: ಕೆ.ಮಹದೇವಸ್ವಾಮಿ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2025, 4:04 IST
Last Updated 28 ಡಿಸೆಂಬರ್ 2025, 4:04 IST
ಹುಣಸೂರಿನ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಅಂತರ ಪೀಳಿಗೆಯ ಜಾಗೃತಿ ಕಾರ್ಯಕ್ರಮವನ್ನು ಅತಿಥಿಗಳು ಉದ್ಘಾಟಿಸಿದರು
ಹುಣಸೂರಿನ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಅಂತರ ಪೀಳಿಗೆಯ ಜಾಗೃತಿ ಕಾರ್ಯಕ್ರಮವನ್ನು ಅತಿಥಿಗಳು ಉದ್ಘಾಟಿಸಿದರು   

ಮೈಸೂರು: ‘ಪ್ರಸ್ತುತ ದಿನಗಳಲ್ಲಿ ಹಿರಿಯರ ಮಾರ್ಗದರ್ಶನ ಕಿರಿಯರಿಗೆ ತುಂಬಾ ಅವಶ್ಯಕ, ಅದನ್ನು ಸದಪಯೋಗ ಮಾಡಿಕೊಳ್ಳಬೇಕು’ ಎಂದು ಸಮಾಜಶಾಸ್ತ್ರ ಉಪನ್ಯಾಸಕ ಕೆ.ಮಹದೇವಸ್ವಾಮಿ ಹೇಳಿದರು.

ಹುಣಸೂರಿನ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ರಾಜ್ಯ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಹಿರಿಯ ಸ್ವಯಂಸೇವಕ ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ನಡೆದ ಅಂತರ ಪೀಳಿಗೆಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಹಾಗೆಯೇ ಹಿರಿಯರ ಜೀವನ ಉತ್ತಮವಾಗಿ ಇರುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನೂ ಕಿರಿಯರು ನಿರ್ವಹಿಸಬೇಕು’ ಎಂದರು.

ADVERTISEMENT

ಮಾತೃಶ್ರೀ ಸಂಸ್ಥೆ ಸಂಸ್ಥಾಪಕ ಮಂಜುನಾಥ್ ಮಾತನಾಡಿ, ‘ಹಿರಿಯ ನಾಗರಿಕರಿಗೆ ಇರುವ ಸರ್ಕಾರದ ಸೌಲಭ್ಯ ಹಾಗೂ ಕಾನೂನುಗಳ ವಿಚಾರವನ್ನು ವಿದ್ಯಾರ್ಥಿಗಳಿಗೆ ತಿಳಿದು ಹಿರಿಯರಿಗೆ ತಲುಪಿಸಲು ಕ್ರಮವಹಿಸಬೇಕು’ ಎಂದು ಹೇಳಿದರು.

ಪ್ರಾಂಶುಪಾಲ ರಾಮೇಗೌಡ ಕಾರ್ಯಕ್ರಮ ಉದ್ಘಾಟಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.