ಮೈಸೂರು: ಡಾ.ಅಂಬೇಡ್ಕರ್ ಸಮಾಜವಾದಿ ಡೆಮಾಕ್ರಟಿಕ್ ಪಾರ್ಟಿಗೆ ಚುನಾವಣಾ ಆಯೋಗ ನೋಟಿಸ್ ಜಾರಿಗೊಳಿಸಿದೆ.
ಆಯೋಗದಿಂದ ನೋಂದಾಯಿತ, ಮಾನ್ಯತೆ ಪಡೆಯದ ರಾಜಕೀಯ ಪಕ್ಷವು ಕಳೆದ 6 ವರ್ಷಗಳಿಂದ ಯಾವುದೇ ಲೋಕಸಭಾ ಚುನಾವಣೆ ಅಥವಾ ವಿಧಾನಸಭಾ ಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರುವ ಹಾಗೂ ನೋಂದಾಯಿತ ವಿಳಾಸದಲ್ಲಿ ಪಕ್ಷವು ಕಾರ್ಯನಿರ್ವಹಿಸುತ್ತಿಲ್ಲದಿರುವುದನ್ನು ಪರಿಗಣಿಸಿ ಕ್ರಮ ಕೈಗೊಳ್ಳಲಾಗಿದೆ.
ಇಂತಹ ಪಕ್ಷಗಳನ್ನು ನೋಂದಾಯಿತ ರಾಜಕೀಯ ಪಕ್ಷಗಳ ಪಟ್ಟಿಯಿಂದ ಕೈಬಿಡುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಪೂರ್ವದಲ್ಲಿ ಪಕ್ಷಕ್ಕೆ ಸಮಜಾಯಿಷಿ ನೀಡಲು ಅವಕಾಶ ಕಲ್ಪಿಸಿ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಆಯೋಗವು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.