ತಿ.ನರಸೀಪುರ: ತಾಲ್ಲೂಕಿನ ಮೂಗೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಗದೀಶಮೂರ್ತಿ, ಉಪಾಧ್ಯಕ್ಷರಾಗಿ ಎಂ.ಬಿ.ಪರಶಿವಮೂರ್ತಿ ಶನಿವಾರ ಅವಿರೋಧವಾಗಿ ಆಯ್ಕೆಯಾದರು.
ಗ್ರಾಮದ ಸಹಕಾರ ಸಂಘದ ಸಭಾಂಗಣದಲ್ಲಿ ನೂತನ ಆಡಳಿತ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಜಗದೀಶಮೂರ್ತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಂ.ಬಿ.ಪರಶಿವಮೂರ್ತಿ ಅವರಿಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರು.
ಚುನಾವಣಾ ಸಭೆಯಲ್ಲಿ ಸಂಘದ 12 ಮಂದಿ ನಿರ್ದೇಶಕರು ಭಾಗವಹಿಸಿದ್ದರು. ಚುನಾವಣಾಧಿಕಾರಿಯಾಗಿ ಹೆಚ್.ಎನ್.ಸುಮಾ ಕಾರ್ಯನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಸಂಘದ ನಿರ್ದೇಶಕರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಚುನಾವಣೆ ಬಳಿಕ ಅಧ್ಯಕ್ಷ ಜಗದೀಶಮೂರ್ತಿ ಮಾತನಾಡಿ, ಅವಿರೋಧವಾಗಿ ಅಧ್ಯಕ್ಷರಾಗಲು ಸಹಕಾರ ನೀಡಿದ ನಿರ್ದೇಶಕರು ಹಾಗೂ ಸದಸ್ಯರೆಲ್ಲರ ವಿಶ್ವಾಸದೊಡನೆ ಸಂಘದ ಅಭಿವೃದ್ಧಿಗೆ ದುಡಿಯುವುದಾಗಿ ತಿಳಿಸಿದರು.
ಸಂಘದ ನಿರ್ದೇಶಕರಾದ ಎಂ.ಎನ್.ನಿಜಗುಣ, ಎಂ.ಬಿ.ಮಹೇಂದ್ರಕುಮಾರ್, ರಾಮೇಶನಾಯಕ, ಎಂ.ಕೆ.ಶರತ್ ಕುಮಾರ, ಎಂ.ಶಿವಸ್ವಾಮಿ, ಕಮಲಮ್ಮ, ರಾಧಾ, ತವಸಾರಯ್ಯ, ಎಂ.ಶಿವಮೂರ್ತಿ, ಎಸ್.ಸತೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಡಿ.ಲೋಕೇಶ್, ಸದಸ್ಯ ಪುಟ್ಟಮಾದಯ್ಯ, ಮುಖಂಡರಾದ ಚೇತನ್, ಗುರುಮಲ್ಲಯ್ಯ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.