ADVERTISEMENT

ಮರಗಳನ್ನು ರಕ್ಷಿಸಲು ಪರಿಸರವಾದಿಗಳ ಮೊರೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2020, 14:13 IST
Last Updated 18 ನವೆಂಬರ್ 2020, 14:13 IST
ಪರಿಸರ ಉಳಿಸಬೇಕು ಹಾಗೂ ಕಾನೂನು ಬಾಹಿರವಾಗಿ ಮರಗಳನ್ನು ಕತ್ತರಿಸಬಾರದು ಎಂದು ಆಗ್ರಹಿಸಿ ಪರಿಸರ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಮೈಸೂರಿನ ಪಾಲಿಕೆ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು
ಪರಿಸರ ಉಳಿಸಬೇಕು ಹಾಗೂ ಕಾನೂನು ಬಾಹಿರವಾಗಿ ಮರಗಳನ್ನು ಕತ್ತರಿಸಬಾರದು ಎಂದು ಆಗ್ರಹಿಸಿ ಪರಿಸರ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಮೈಸೂರಿನ ಪಾಲಿಕೆ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು   

ಮೈಸೂರು: ನಗರದಲ್ಲಿರುವ ಮರಗಳನ್ನು ರಕ್ಷಿಸಬೇಕು ಎಂದು ಆಗ್ರಹಿಸಿ ಪರಿಸರ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಬುಧವಾರ ಪಾಲಿಕೆ ಮುಂಭಾಗ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪರಿಸರವಾದಿ ಭಾನುಮೋಹನ್, ‘ನಗರ ವ್ಯಾಪ್ತಿಯಲ್ಲಿರುವ ಮರಗಳನ್ನು ರಕ್ಷಿಸುವಲ್ಲಿ ಅಧಿಕಾರಿಗಳು ಸೋಲುತ್ತಿದ್ದಾರೆ. ಬಿದ್ದು ಹೋಗುವ ಮರಗಳನ್ನು ತೆರವುಗೊಳಿಸುವ ವಿಚಾರದಲ್ಲೂ ಸರ್ಕಾರಕ್ಕೆ ನಷ್ಟವಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಉದ್ಯಾನಗಳಲ್ಲಿ ನಿಯಮಬಾಹಿರವಾಗಿ ಕಟ್ಟಡಗಳನ್ನು ನಿರ್ಮಿಸಲು ಆವಕಾಶ ಮಾಡಿಕೊಡಲಾಗುತ್ತಿದೆ. ಇದರಿಂದ ಉದ್ಯಾನದಲ್ಲಿರುವ ಅಮೂಲ್ಯ ವೃಕ್ಷಗಳು ಬಲಿಯಾಗುತ್ತಿದೆ. ಈ ಕುರಿತು ಯಾವುದೇ ಕಾಳಜಿ ಅಧಿಕಾರಿಗಳಿಗೆ ಇಲ್ಲ ಎಂದು ಅವರು ಟೀಕಿಸಿದರು.

ADVERTISEMENT

ತೆರವು ಮಾಡಿದ ಮರಗಳ ಮೌಲ್ಯವನ್ನು ನಿಗದಿ ಮಾಡುವಲ್ಲಿಯೂ ಅಧಿಕಾರಿಶಾಹಿ ಎಡವುತ್ತಿದೆ. ಕಡಿಮೆ ಮೌಲ್ಯ ನಿಗದಿಪಡಿಸಿ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಲಾಗುತ್ತಿದೆ. ಈ ನ್ಯೂನತೆಗಳನ್ನು ಸರಿಪಡಿಸಬೇಕು ಎಂದು ಅವರು ಆಗ್ರಹಿಸಿದರು.

ಪರಿಸರವಾದಿಗಳಾದ ಅರವಿಂದ ಶರ್ಮ, ರಾಘವೇಂದ್ರ, ಮಣಿಕಂಠ ಪ್ರತಿಭಟನೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.