ADVERTISEMENT

ಮೈಸೂರು| ವಿದ್ಯುನ್ಮಾನ ಮತಯಂತ್ರಗಳ ಪರಿಶೀಲಿಸಿದ ಡಾ.ಕೆ.ವಿ.ರಾಜೇಂದ್ರ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2023, 7:40 IST
Last Updated 18 ಫೆಬ್ರುವರಿ 2023, 7:40 IST
ಮೈಸೂರಿನಲ್ಲಿ ವಿದ್ಯುನ್ಮಾನ ಮತಯಂತ್ರಗಳ ಪರಿಶೀಲನೆ ಕಾರ್ಯವನ್ನು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ವೀಕ್ಷಿಸಿ ಮಾಹಿತಿ ಪಡೆದರು
ಮೈಸೂರಿನಲ್ಲಿ ವಿದ್ಯುನ್ಮಾನ ಮತಯಂತ್ರಗಳ ಪರಿಶೀಲನೆ ಕಾರ್ಯವನ್ನು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ವೀಕ್ಷಿಸಿ ಮಾಹಿತಿ ಪಡೆದರು   

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಹಂಚಿಕೆಯಾಗಿರುವ ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ಪ್ರಥಮ ಹಂತದ ಪರಿಶೀಲನಾ ಕಾರ್ಯವನ್ನು ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಆರಂಭಿಸಲಾಗಿದೆ.

ಸಿದ್ದಾರ್ಥನಗರದ ನೂತನ ಜಿಲ್ಲಾಧಿಕಾರಿ ಕಚೇರಿಗಳ ಸಂಕೀರ್ಣದ ಸಮೀಪದಲ್ಲಿ ನಿರ್ಮಿಸಿರುವ ವಿದ್ಯುನ್ಮಾನ ಮತಯಂತ್ರಗಳ ಭದ್ರತಾ ಕೊಠಡಿಯಲ್ಲಿ ಪ್ರಕ್ರಿಯೆ ನಡೆಯುತ್ತಿದೆ. 5,635 ಬ್ಯಾಲೆಟ್ ಯುನಿಟ್‌ಗಳು ಹಾಗೂ 3,958 ಕಂಟ್ರೋಲ್ ಯುನಿಟ್‌ಗಳನ್ನು ಜಿಲ್ಲೆಗೆ ಹಂಚಿಕೆ ಮಾಡಲಾಗಿದೆ. ಈಚೆಗೆ, ಚುನಾವಣಾ ಆಯೋಗದಿಂದ 4,274 ವಿವಿಪ್ಯಾಟ್‌ ಯಂತ್ರಗಳು ಹಂಚಿಕೆಯಾಗಿದ್ದು, ಅವುಗಳನ್ನು ಹೈದರಾಬಾದ್‌ನಿಂದ ತರಲಾಗಿದೆ.

ಇವಿಎಂಗಳನ್ನು ಪರಿಶೀಲನೆ ನಡೆಸುವ ಕಾರ್ಯವನ್ನು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಶನಿವಾರ ವೀಕ್ಷಿಸಿದರು. ಮಾರ್ಗಸೂಚಿ ಪಾಲಿಸುವಂತೆ ಹಾಗೂ ಲೋಪವಾಗದಂತೆ ನೋಡಿಕೊಳ್ಳುವಂತೆ ನಿಯೋಜಿತ ಸಿಬ್ಬಂದಿಗೆ ತಿಳಿಸಿದರು.

ADVERTISEMENT

ಕೇಂದ್ರದ ಬಳಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ.

ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜರಾಂ, ಚುನಾವಣಾ ತಹಶೀಲ್ದಾರ್ ರಾಮ್‌ಪ್ರಸಾದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.