ADVERTISEMENT

ಪ್ರಜಾಪ್ರಭುತ್ವ ಮಂಕಾಗುತ್ತಿದೆ: ಡಾ.ಹೆಚ್.ಸಿ.ಮಹದೇವಪ್ಪ ಆತಂಕ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2020, 8:54 IST
Last Updated 2 ಮಾರ್ಚ್ 2020, 8:54 IST
ಡಾ.ಎಚ್.ಸಿ.ಮಹದೇವಪ್ಪ
ಡಾ.ಎಚ್.ಸಿ.ಮಹದೇವಪ್ಪ   

ಮೈಸೂರು: ದೇಶದಲ್ಲಿ ಈಗ ಪ್ರಜಾಪ್ರಭುತ್ವ ಮಂಕಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ಆತಂಕ ವ್ಯಕ್ತಪಡಿಸಿದರು.

ಇಲ್ಲಿನ ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರದ ವತಿಯಿಂದ ‘ಗ್ರಂಥಾಲಯ, ವಸ್ತುಸಂಗ್ರಹಾಲಯ ಮತ್ತು ದಲಿತ ದಾಖಲೀಕರಣ ಕೇಂದ್ರ’ಕ್ಕೆ ಸೋಮವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಸಂವಿಧಾನದ ಮೇಲೆ ಸವಾರಿ ಮಾಡಲಾಗುತ್ತಿದೆ. ನ್ಯಾಯಾಂಗದಲ್ಲೂ ಪಕ್ಷ‍ಪಾತ ನಡೆಯುತ್ತಿದೆ. ಮಾಧ್ಯಮಗಳು ಕಾರ್ಪೋರೆಟೀಕರಣಗೊಂಡಿವೆ. ಪ್ರಜಾಪ್ರಭುತ್ವಕ್ಕೆ ಮಾರಕವಾದ ವರದಿಗಳು ಪ್ರಕಟವಾಗುತ್ತಿವೆ. ಬುದ್ಧ, ಬಸವ, ಅಂಬೇಡ್ಕರ್ ಅರಿಯದ ಜನರು ಆಳ್ವಿಕೆ ನಡೆಸುತ್ತಿದ್ದು, ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ತುಂಬಾ ಅಪಾಯಕಾರಿಯಾದ ಸನ್ನಿವೇಶದಲ್ಲಿ ಭಾರತ ಇದೆ ಎಂದು ವಿಶ್ಲೇಷಿಸಿದರು.

ADVERTISEMENT

ಮಹಾತ್ಮ ಗಾಂಧಿ, ಬಿ.ಆರ್.ಅಂಬೇಡ್ಕರ್ ಇಲ್ಲದ ದೇಶ ಕಟ್ಟಲು ಕೆಲವರು ಹೊರಟಿದ್ದಾರೆ. ಇದರ ವಿರುದ್ಧ ಸಂವಿಧಾನದ ಚೌಕಟ್ಟಿನಲ್ಲಿ ದನಿ ಎತ್ತಬೇಕಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.